ಲಕ್ಷ್ಮೇಶ್ವರ: ‘ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ತಹಶೀಲ್ದಾರ್ ವಾಸುದೇವ ಸ್ವಾಮಿ, ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‍ಐ ನಾಗರಾಜ ಗಡದ ಹಾಗೂ ಪೊಲೀಸ್ ಸಿಬ್ಬಂದಿ ಮಂಗಳವಾರ ಬೈಕ್ ರ್‍ಯಾಲಿ ನಡೆಸಿದರು.
ಪಟ್ಟಣದ ಪೊಲೀಸ್ ಠಾಣೆಯಿಂದ ಆರಂಭವಾದ ಬೈಕ್ ರ್‍ಯಾಲಿಯು ಹೊಸ ಬಸ್ ನಿಲ್ದಾಣ, ಪುರಸಭೆ, ಸೋಮೇಶ್ವರ ಪಾದಗಟ್ಟಿ, ವಿದ್ಯಾರಣ್ಯ ವರ್ತುಲ, ಮಹಾಕವಿ ಪಂಪ ವರ್ತುಲ, ದೂದಪೀರಾಂ ದರ್ಗಾ ಮೂಲಕ ಸಂಚರಿಸಿತು.
ತಹಶೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ‘ಮಾದಕ ದ್ರವ್ಯ ಸೇವಿಸುವವರ ಸಂಖ್ಯೆ ಹೆಚ್ಚಾಗಿದ್ದು, ಅದರಲ್ಲೂ ಯುವ ಜನತೆ ಅಧಿಕ ಪ್ರಮಾಣದಲ್ಲಿದ್ದಾರೆ. ಆದರೆ, ಪಟ್ಟಣ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಸೇವನೆ ನಿರಂತರವಾಗಿದ್ದು, ಮಾನಸಿಕ ಮತ್ತು ದೈಹಿಕ ಆರೋಗ್ಯ ಸಂಪೂರ್ಣ ಹಾಳಾಗುತ್ತದೆ. ಮಾದಕ ವಸ್ತುಗಳು ವಿವಿಧ ರೂಪಗಳಲ್ಲಿ ಮಾರಾಟ ಆಗುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದರು.
ಸಿಪಿಐ ನಾಗರಾಜ ಮಾಡಳ್ಳಿ ಮಾತನಾಡಿ, ‘ಮಾದಕ ಪದಾರ್ಥಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರ. ಒಂದು ವೇಳೆ ಇವುಗಳನ್ನು ಮಾರಾಟ ಮಾಡುವುದು ಕಂಡ ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.