
ಪ್ರಜಾವಾಣಿ ವಾರ್ತೆಲಕ್ಷ್ಮೇಶ್ವರ: ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರ 75ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ಪಟ್ಟಣದ ಚೆನ್ನಮ್ಮನ ವನದಲ್ಲಿ ಮೇ 30ರಂದು ಜರುಗಲಿದೆ.
ರಂಭಾಪುರಿಯ ವೀರಸೋಮೇಶ್ವರ ಸ್ವಾಮೀಜಿ ಅವರಿಂದ ಇಷ್ಟಲಿಂಗ ಪೂಜೆ ಬೆಳಿಗ್ಗೆ 8ರಿಂದ ನೆರವೇರಲಿದೆ. ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಸ್ವಾಮೀಜಿ ಉಪಸ್ಥಿತರಿರುವರು.
ಬೆಳಿಗ್ಗೆ 11ಕ್ಕೆ ನಡೆಯುವ ಅಭಿಮಾನೋತ್ಸವದ ಸಾನ್ನಿಧ್ಯವನ್ನು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ವಹಿಸಿಕೊಳ್ಳುವರು. ಸಭಾಪತಿಗಳಾದ ಬಸವರಾಜ ಹೊರಟ್ಟಿ ಆಗಮಿಸುವರು. ಪುರಸಭೆ ಅಧ್ಯಕ್ಷೆ ಯಲ್ಲಮ್ಮ ದುರಗಣ್ಣವರ ಅಧ್ಯಕ್ಷತೆ ವಹಿಸುವರು. ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಆಗಮಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.