ADVERTISEMENT

ನೋಂದಣಿ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಸಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಜನನ ಮತ್ತು ಮರಣ ನೋಂದಣಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 4:29 IST
Last Updated 25 ಜುಲೈ 2025, 4:29 IST
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು  
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು     

ಗದಗ: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ವಿಳಂಬ ಮಾಡದೇ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಮತ್ತು ಮರಣ ನೋಂದಣಿ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯಲ್ಲಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸರಿಯಾಗಿ ಸಂಗ್ರಹಿಸಬೇಕು. ಅರ್ಜಿದಾರರ ಶುಲ್ಕವನ್ನು ವಿಳಂಬ ಮಾಡದೇ ಜಮೆ ಮಾಡಬೇಕು. ನೋಂದಣಿ ಪ್ರಮಾಣಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಕಡ್ಡಾಯವಾಗಿರಬೇಕು ಹಾಗೂ ತಾಲ್ಲೂಕು ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಡಾಯವಾಗಿ ನಡೆಯಬೇಕು’ ಎಂದು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ‘ಜಿಲ್ಲೆಯಲ್ಲಿ ಏಪ್ರಿಲ್ 2025ರಿಂದ ಜೂನ್‌ವರೆಗೆ 2,505 ಮಕ್ಕಳ ಜನನವಾಗಿದ್ದು, ನಿಗದಿತ ಸಮಯದಲ್ಲಿ ನೋಂದಣಿಯಾಗಿದೆ. ಹಾಗೆಯೇ, 1,925 ಮರಣ ಘಟನೆಗಳು ನಿಗದಿತ ಸಮಯದಲ್ಲಿಯೇ ನೋಂದಣಿಯಾಗಿ ಶೇ 78ರಷ್ಟು ಪ್ರಗತಿ ಸಾಧಿಸಲಾಗಿದೆ’ ಎಂದರು.

ADVERTISEMENT

2025ರಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ವಿವರ ಹಾಗೂ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರು, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್., ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ. ರೇಖಾ ಸೋನಾವಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಡಿಡಿಎಲ್‌ಆರ್ ರುದ್ರಣ್ಣಗೌಡ ಜಿ.ಜೆ., ವಾರ್ತಾಧಿಕಾರಿ ವಸಂತ ಮಡ್ಲೂರ ಇದ್ದರು.

ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕು
ಎ.ಎ. ಕಂಬಾಳಿಮಠ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.