
ರೋಣ: ರಾಜ್ಯ ಸರ್ಕಾರ ಅನುಷ್ಠಾನದ ದ್ವೇಷ ಭಾಷಣ ಮಸೂದೆ ವಿರೋಧಿಸಿ ಬಿಜೆಪಿ ಮಂಡಲ ಕಾರ್ಯಕರ್ತರು ಉಪ ತಹಶೀಲ್ದಾರ್ ಗಣೇಶ ಕೊಪ್ಪದ ಅವರಿಗೆ ಮನವಿ ಸಲ್ಲಿಸಿದರು.
ಪಕ್ಷದ ಹಿರಿಯ ಮುಖಂಡ ಅಶೋಕ ನವಲಗುಂದ, ‘ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಸಾಮಾಜಿಕ ಸಾಮರಸ್ಯ ನೆಪದಲ್ಲಿ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.
ಬಿಜೆಪಿ ರೋಣ ಮಂಡಲದ ಅಧ್ಯಕ್ಷ ಉಮೇಶ ಮಲ್ಲಾಪುರ ಮಾತನಾಡಿ, ‘ಈ ಮಸೂದೆಯಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಾಜ್ಯ ಸರ್ಕಾರ ಕತ್ತುಹಿಸುಕಲು ಹೊರಟಿದೆ’ ಎಂದು ಆರೋಪಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಪ್ಪ ಚವ್ಹಾಣ, ಪುರಸಭೆ ಮಾಜಿ ಸದಸ್ಯ ಸಂತೋಷ ಕಡಿವಾಲ, ಬಿಜೆಪಿ ರೋಣ ಮಂಡಲದ ಪ್ರಮುಖರಾದ ಶಿವಾನಂದ ಜಿಡ್ಡಿಬಾಗಿಲ, ಅನೀಲ ಪಲ್ಲೆದ, ಹುಲ್ಲಪ್ಪ ಕೆಂಗಾರ, ಮಲ್ಲು ಸಂತೋಜಿ, ಕಿರಣ ಚೆನ್ನವೀರಶೆಟ್ಟರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.