ಗದಗ: ‘ಬಿಜೆಪಿ ತತ್ವ ಸಿದ್ಧಾಂತದ ಪಕ್ಷ. ಬಿಜೆಪಿಗೆ ರಾಜಕೀಯ ಅಧಿಕಾರವೇ ಮುಖ್ಯವಲ್ಲ; ದೀನದಲಿತರು, ಸೌಲಭ್ಯ ವಂಚಿತ ಜನರ ಸೇವೆಯೇ ಪಕ್ಷದ ಮೂಲ ಉದ್ದೇಶವಾಗಿದೆ’ ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆದ ಸೇವಾ ಪಾಕ್ಷಿಕ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ಸಂಘಟನೆ, ಸೇವೆ, ಅಭಿವೃದ್ಧಿ ಬಿಜೆಪಿಯ ಮೂಲಮಂತ್ರ. ಈ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಿಂದ ಮಹತ್ಮಾಗಾಂಧಿ ಜನ್ಮದಿನವಾದ ಅಕ್ಟೋಬರ್ 2ರವರೆಗೆ ದೇಶದಾದ್ಯಂತ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿ, ‘ಜಿಲ್ಲೆಯ 9 ಮಂಡಲ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ವೋಕಲ್ ಫಾರ್ ಲೋಕಲ್ ಮೇಳ, ಸ್ವಚ್ಛತಾ ಅಭಿಯಾನ, ಸಸಿ ನೆಡುವುದು, ಅಂಗವಿಕಲರು ಹಾಗೂ ಸಾಧಕ ವ್ಯಕ್ತಿಗಳಿಗೆ ಸನ್ಮಾನ, ಚಿತ್ರಕಲಾಸ್ಪರ್ಧೆ, ನಮೋ ಮ್ಯಾರಾಥಾನ್, ವಿಚಾರ ಸಂಕಿರಣ, ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು’ ಎಂದು ತಿಳಿಸಿದರು.
ಬಿಜೆಪಿ ಮುಖಂಡರಾದ ಉಮೇಶಗೌಡ ಪಾಟೀಲ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಕರೀಗೌಡ್ರ ಮಾತನಾಡಿದರು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಿರ್ಮಲಾ ಕೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ರಟ್ಟಿಹಳ್ಳಿ ಉಪಸ್ಥಿತರಿದ್ದರು.
ಬಿಜೆಪಿ ಒಂಬತ್ತು ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಈಶ್ವರಪ್ಪ ರಂಗಪ್ಪನವರ, ಒಬಿಸಿ ಮೋರ್ಚಾ ಅಧ್ಯಕ್ಷ ಸಿದ್ದೇಶ ಹೂಗಾರ, ಮಂಡಲ ಅಧ್ಯಕ್ಷರಾದ ನಾಗನಗೌಡ ತಿಮ್ಮನಗೌಡ್ರ, ಉಮೇಶ ಮಲ್ಲಾಪೂರ, ಅಂದಪ್ಪ ಹಾರೂಗೇರಿ, ಸೋಮಶೇಖರ ಚರೇದ, ಬೂದಪ್ಪ ಹಳ್ಳಿ, ಸುರೇಶ ಮರಳಪ್ಪನವರ, ಜಿಲ್ಲಾ ಪ್ರಕೋಷ್ಠ ಸಂಯೋಜಕ ಶಶಿಧರ ದಿಂಡೂರ, ಸಹ ಸಂಯೋಜಕ ರಮೇಶ ಸಜ್ಜಗಾರ, ಸೇವಾ ಪಾಕ್ಷಿಕ ಅಭಿಯಾನ ಜಿಲ್ಲಾ ತಂಡದ ಸದಸ್ಯರಾದ ರಾಮಪ್ಪ ವಕ್ಕರ, ಕೆ.ಪಿ.ಕೋಟಿಗೌಡ್ರ ಹಾಗೂ ಸೇವಾ ಪಾಕ್ಷಿಕ ಜಿಲ್ಲಾ ಹಾಗೂ ಮಂಡಲ ತಂಡಗಳ ಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕರ ಜನ್ಮದಿನವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಪ್ರತಿ ಕಾರ್ಯಕರ್ತನು ಸಮರ್ಪಣಾಭಾವದಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕುಲಿಂಗರಾಜ ಪಾಟೀಲ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ
ಜಿಲ್ಲೆಯ ಪ್ರತಿ ತಾಲ್ಲೂಕು ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸೇವಾ ಕಾರ್ಯಗಳನ್ನು ನಡೆಸಲು ಸೇವಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ಕಾರ್ಯಕರ್ತನು ಸೇವೆ ಸಲ್ಲಿಸುವ ಮುಖಾಂತರ ಸಮಾಜ ಹಾಗೂ ನಾಡಿನ ಋಣ ತೀರಿಸಲು ಶ್ರಮಿಸಬೇಕುಲಿಂಗರಾಜ ಪಾಟೀಲ ಅಭಿಯಾನದ ಜಿಲ್ಲಾ ಸಂಚಾಲಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.