ADVERTISEMENT

‘ಪರಮೇಶ್ವರ್ ರಾಜಕೀಯ ಉನ್ನತಿ ಸಹಿಸದ ಬಿಜೆಪಿ’: ಸಂಜಯ್ ದೊಡ್ಡಮನಿ

​ಪ್ರಜಾವಾಣಿ ವಾರ್ತೆ
Published 24 ಮೇ 2025, 14:25 IST
Last Updated 24 ಮೇ 2025, 14:25 IST
ಸಂಜಯ ದೂಡ್ಡಮನಿ
ಸಂಜಯ ದೂಡ್ಡಮನಿ   

ರೋಣ: ಗೃಹ ಸಚಿವ ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಗದಗ ಜಿಲ್ಲಾ ಪ.ಜಾತಿ ಕಾಂಗ್ರೆಸ್‌ ವಿಭಾಗದ ಮಾಧ್ಯಮ ವಕ್ತಾರ ಸಂಜಯ್ ದೊಡ್ಡಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿ. ಪರಮೇಶ್ವರ್ ಅವರ ರಾಜಕೀಯ ಉನ್ನತಿ ಸಹಿಸದೇ ಕೇಂದ್ರ ಸರ್ಕಾರ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ರಾಜಕೀಯ ದುರುದ್ದೇಶದಿಂದ ಇಡಿ ದಾಳಿಯನ್ನು ನಡೆಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಜಾರಿ ನಿರ್ದೇಶನಾಲಯ ಮಿತಿಮೀರಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದರೆ ಜಾರಿ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಈ ಅಕ್ರಮ ದಾಳಿಯನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.