ADVERTISEMENT

ಗದಗ: ಬಿಜೆಪಿ ಜೋಳಿಗೆಗೆ ಮತ; ಬದಲಾಗುವುದೇ ಅವಳಿ ನಗರದ ಚಿತ್ರಣ?

ಕೊಟ್ಟ ಮಾತಿನಂತೆ ನಡೆಯುವುದೇ ಬಿಜೆಪಿ...

ಸತೀಶ ಬೆಳ್ಳಕ್ಕಿ
Published 31 ಡಿಸೆಂಬರ್ 2021, 8:37 IST
Last Updated 31 ಡಿಸೆಂಬರ್ 2021, 8:37 IST
ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು   

ಗದಗ: ಡಿ.27ರಂದು ಗದಗ–ಬೆಟಗೇರಿ ನಗರಸಭೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30ರಂದು ನಡೆದಿದ್ದು, ಬಿಜೆಪಿಗೆ ಸರಳ ಬಹುಮತ ದೊರೆತಿದೆ. ಈ ಮೂಲಕ ದಶಕಗಳ ಬಳಿಕ ಅಧಿಕಾರ ಹಿಡಿದ ಸಂಭ್ರಮದಲ್ಲಿ ಬಿಜೆಪಿ ತೇಲುತ್ತಿದ್ದರೆ; ಹಲವು ಬಾರಿ ನಗರಸಭೆಯಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ಗೆ ಮುಖಭಂಗವಾಗಿದೆ.

ಗದಗ ಬೆಟಗೇರಿ ನಗರಸಭೆಯ ಒಟ್ಟು 35 ವಾರ್ಡ್‌ಗಳ ಪೈಕಿ 18 ವಾರ್ಡ್‌ಗಳಲ್ಲಿ ಬಿಜೆಪಿ ಜಯಗಳಿಸಿದೆ. ಕಳೆದ ಬಾರಿ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ 15 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಪಕ್ಷೇತರರು ಗೆಲುವಿನ ನಗು ತುಳುಕಿಸಿದ್ದಾರೆ.

ಗದಗ–ಬೆಟಗೇರಿ ನಗರಸಭೆ ಚುನಾವಣೆಯನ್ನು ಎರಡೂ ಪಕ್ಷಗಳ ಮುಖಂಡರು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದ್ದರು. ಇದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಕಾಂಗ್ರೆಸ್‌ಗೆ ತೀವ್ರ ನಿರಾಸೆ ಮೂಡಿಸಿದೆ. ನಗರಸಭೆಯಲ್ಲಿ ಸಿಕ್ಕಿರುವ ಗೆಲುವು ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಆಗಲಿದೆ ಎಂದು ಬಿಜೆಪಿ ನಾಯಕರು ವಿಶ್ಲೇಷಣೆ ಮಾಡುತ್ತಿದ್ದಾರೆ.

ADVERTISEMENT

ಮೋಡಿ ಮಾಡಿದ ಶ್ರೀರಾಮುಲು, ಅನಿಲ ಮೆಣಸಿನಕಾಯಿ ಜೋಡಿ: ಚುನಾವಣೆಗೂ ಮುನ್ನ ಎರಡು ದಿನಗಳ ಕಾಲ ಗದಗ–ಬೆಟಗೇರಿ ನಗರದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದ ಸಚಿವ ಶ್ರೀರಾಮುಲು ಹಾಗೂ ಯುವ ಮುಖಂಡ ಅನಿಲ ಮೆಣಸಿನಕಾಯಿ ಜೋಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಎಸ್‌.ವಿ.ಸಂಕನೂರ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಬಿಜೆಪಿ ನಾಯಕ
ರೆಲ್ಲರ ಸಾಂಘಿಕ ಪ್ರಯತ್ನದಿಂದ ಗದಗ ಬೆಟಗೇರಿ ನಗರಸಭೆ ಬಿಜೆಪಿ ಕೈವಶವಾಗಿದೆ.

ಯುವನಾಯಕ ಅನಿಲ ಮೆಣಸಿನಕಾಯಿ ‘ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಭಿಕ್ಷೆ’ ಎಂಬ ಅಭಿಯಾನ ಆರಂಭಿಸಿ ಕೈಯಲ್ಲಿ ಜೋಳಿಗೆ ಹಿಡಿದು ಅವಳಿ ನಗರದ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದ್ದರು. ಅಧಿಕಾರ ಕೊಟ್ಟರೆ ವಾರ್ಡ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು. ಬಿಜೆಪಿ ನಾಯಕರ ಮಾತು ನಂಬಿ ಮತದಾರರು ಬಿಜೆಪಿ ಜೋಳಿಗೆಗೆ ಮತ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಕೊಟ್ಟ ಮಾತಿನಂತೆ ನಡೆಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.