ADVERTISEMENT

ಕರಿ ಗಣಜಲಿ: ಕೌಜಗೇರಿಗೆ ಜಿಲ್ಲಾಡಳಿತ ದೌಡು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 15:00 IST
Last Updated 6 ಫೆಬ್ರುವರಿ 2019, 15:00 IST
ಕೌಜಗೇರಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬುಧವಾರ ಮನೆ ಮನೆಗೆ ಭೇಟಿ ನೀಡಿ ಕರಿ ಗಣಜಲಿಯಿಂದ ಬಳಲುತ್ತಿರುವವರನ್ನು ಪರಿಶೀಲಿಸಿದರು
ಕೌಜಗೇರಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಬುಧವಾರ ಮನೆ ಮನೆಗೆ ಭೇಟಿ ನೀಡಿ ಕರಿ ಗಣಜಲಿಯಿಂದ ಬಳಲುತ್ತಿರುವವರನ್ನು ಪರಿಶೀಲಿಸಿದರು   

ರೋಣ: ಕರಿ ಗಣಜಲಿ(ಬ್ಲಾಕ್ ಚಿಕನ್ ಫಾಕ್ಸ್) ವ್ಯಾಪಿಸಿರುವ ತಾಲ್ಲೂಕಿನ ಕೌಜಗೇರಿ ಗ್ರಾಮಕ್ಕೆ ಬುಧವಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ರೋಗ ಪೀಡಿತರಿಗೆ ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಿದರು.

ಗ್ರಾಮದಲ್ಲಿ 200ಕ್ಕೂ ಹೆಚ್ಚು ಜನರಿಗೆ ಈ ರೋಗ ಕಾಣಿಸಿಕೊಂಡಿದ್ದು, ಸೂಕ್ತ ಚಿಕಿತ್ಸೆ ಲಭಿಸಿದೆ ಪರದಾಡಿದ್ದರು.ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದರು. ಈ ಕುರಿತು ಮಂಗಳವಾರ ‘ಪ್ರಜಾವಾಣಿ’ಯಲ್ಲಿ ‘ಊರನ್ನೇ ವ್ಯಾಪಿಸಿದ ಕರಿ ಗಣಜಲಿ: ಗ್ರಾಮದಲ್ಲಿ ಆತಂಕ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಪತ್ರಿಕಾ ವರದಿ ಗಮನಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ, ಕರಿ ಗಣಜಲಿ ವ್ಯಾಪಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿದರು. ರೋಗಿಗಳಿಗೆ ಲಸಿಕೆಗಳನ್ನು ಹಾಕಿದರು. ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

’ಕೌಜಗೇರಿ ಗ್ರಾಮದಲ್ಲಿ ಬ್ಲಾಕ್‌ ಚಿಕನ್‌ ಫಾಕ್ಸ್‌ ಪ್ರಕರಣ ವರದಿಯಾಗಿದ್ದು, ಈ ಕಾಯಿಲೆಯಿಂದ ಬಳಲುತ್ತಿರುವವರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ. ಈಗಾಗಲೇ ಬೆಳವಣಿಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ಮಾಡುತ್ತಿದ್ದಾರೆ.ಇದು ಮಾರಣಾಂತಿಕ ಕಾಯಿಲೆ ಅಲ್ಲ. ಜನರು ಭಯಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಆರೋಗ್ಯ ಸಮೀಕ್ಷಣಾಧಿಕಾರಿ ಸತೀಶ ಬಸರಿಗಿಡದ ’ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.