ADVERTISEMENT

ಡ್ರಗ್ಸ್‌ ಮಾಫಿಯಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 19:11 IST
Last Updated 28 ಡಿಸೆಂಬರ್ 2025, 19:11 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಗದಗ: ‘ರಾಜ್ಯದಲ್ಲಿ ಡ್ರಗ್ಸ್ ಬಳಕೆ ಹೆಚ್ಚಿದೆ. ವಿಶೇಷ ದಳ ರಚಿಸಿದರೂ ನಿಯಂತ್ರಣಕ್ಕೆ ಬಂದಿಲ್ಲ. ಡ್ರಗ್ಸ್‌ ಮಾಫಿಯಾ ನಿಯಂತ್ರಣದಲ್ಲಿ ಸರ್ಕಾರ ಇದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಭಾನುವಾರ ಇಲ್ಲಿ ಆರೋಪಿಸಿದರು.

‘ಮಾದಕ ವಸ್ತು ತಯಾರಿಕೆ, ಕಳ್ಳ ಸಾಗಣೆ ಜಾಲದಲ್ಲಿ ಪೊಲೀಸರೂ ಶಾಮೀಲಾಗಿರುವ ಅನುಮಾನ ಮೂಡುತ್ತಿದೆ. ಮುಖ್ಯಮಂತ್ರಿ ಅವರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಪಂಜಾಬ್‌ ರೀತಿ, ಉಡ್ತಾ ಕರ್ನಾಟಕ ಆಗಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಮಾದಕ ವಸ್ತು ಬಳಕೆ, ಸಾಗಣೆ ತಡೆಗೆ ವಿಶೇಷ ಕಾನೂನು ಇದ್ದು, ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ದ್ವೇಷ ಭಾಷಣದ ವಿರುದ್ಧ ಕಾನೂನು ತರುವ ಬದಲು, ಡ್ರಗ್ಸ್‌, ಕಳ್ಳಭಟ್ಟಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.