ADVERTISEMENT

ಸಾಮಾಜಿಕ ನ್ಯಾಯದ ಹರಿಕಾರ ಅರಸು: ಸಿ.ಸಿ. ಪಾಟೀಲ

ಗ್ರಂಥಾಲಯಕ್ಕೆ ₹ 80 ಲಕ್ಷ ಅನುದಾನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 5:01 IST
Last Updated 7 ಜನವರಿ 2022, 5:01 IST
ನರಗುಂದದಲ್ಲಿ ₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕಟ್ಟಡವನ್ನು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಸಿದರು
ನರಗುಂದದಲ್ಲಿ ₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕಟ್ಟಡವನ್ನು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಸಿದರು   

ನರಗುಂದ: ಹಿಂದುಳಿದ ವರ್ಗಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಪಾತ್ರ ದೊಡ್ಡದು. ಅರಸು ಸಾಮಾಜಿಕ ನ್ಯಾಯದ ಹರಿಕಾರ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಪಟ್ಟಣದಲ್ಲಿ ಬುಧವಾರ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕಟ್ಟಡದ ಉದ್ಘಾಟಸಿ ಮಾತನಾಡಿದರು, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳ್ಗೆಗೆ ಹಲವಾರು ಯೋಜನೆ ಜಾರಿಗೆ ತರುವ ಮೂಲಕ ವಿಶೇಷ ಕೊಡುಗೆ ನೀಡಿದರು. ಎಲ್ಲ ಕ್ಷೇತ್ರಗಳಲ್ಲಿ ಹಿಂದುಳಿದವರು ತೊಡಗಿಕೊಂಡು ಸಾಧಿಸುವಂತೆ ಪ್ರೇರೆಪಿಸಿದ ಅವರ ತತ್ವಾದರ್ಶಗಳು ಎಲ್ಲರಿಗೂ ಮಾದರಿ ಎಂದರು.

ಬಾಲಕಿಯರ ವಸತಿ ನಿಲಯದಲ್ಲಿ ಡಿಜಿಟಲ್ ಗ್ರಂಥಾಲಯ ನಿರ್ಮಾಣಕ್ಕೆ ₹ 80 ಲಕ್ಷ ಅನುದಾನವನ್ನು ಒದಗಿಸಿಕೊಡಲಾಗುವುದು. ತಮ್ಮ ಶೈಕ್ಷಣಿಕ ಪ್ರಗತಿಯಲ್ಲಿ ಅಂಕ ಪಡೆಯುವುದರ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡುತ್ತಾ ದೇಶದ ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.

ADVERTISEMENT

ಕೋವಿಡ್ ಬಗ್ಗೆ ಎಲ್ಲರೂ ಜಾಗರೂಕರಾಗಿರಬೇಕು. ಸರ್ಕಾರವು ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮ ಜಾರಿ ಮಾಡುತ್ತಿದೆಯೇ ಹೊರತು ಸಾರ್ವಜನಿಕರಿಗೆ ತೊಂದರೆ ಕೊಡುವುದಕ್ಕೆ ಅಲ್ಲ. ಇದನ್ನು ಎಲ್ಲರೂ ಅರಿಯಬೇಕೆಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ಗುರಪ್ಪ ಆದೆಪ್ಪನವರ, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ ಪಟ್ಟಣಶೆಟ್ಟಿ, ಎಂ.ಎಸ್. ಪಾಟೀಲ, ಸಿದ್ದಪ್ಪ ಯಲಿಗಾರ, ಪವಾಡೆಪ್ಪ ವಡ್ಡಿಗೇರಿ, ಚಂದ್ರಗೌಡ ಪಾಟೀಲ, ಹನುಮಂತ ಹವಾಲ್ದಾರ, ದೇವಣ್ಣ ಕಲಾಲ, ರಾಚನಗೌಡ ಪಾಟೀಲ, ಸುನೀಲ ಕುಷ್ಟಗಿ, ಹುಸೇನಸಾಬ ಗೋಟೂರ, ಎಂ.ಎಂ.ತುಂಬೂರಮಟ್ಟಿ, ಸುಜಾತಾ ಕಾಳೆ, ಎಇಇ ಮಲ್ಲಿಕಾರ್ಜುನ ಸ್ವಾಮಿ, ಗೀತಾ ಹೂಗಾರ, ಯು.ಎಸ್.ಅವರಾದಿ, ಎಸ್.ಬಿ.ಪಾಟೀಲ, ಆರ್.ಎಂ.ಬಾನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.