
ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದಲ್ಲಿ ತಾಲ್ಲೂಕು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಖಾಲಿಗಾಡಾ ಓಡಿಸುವ ಸ್ಪರ್ಧೆಯಲ್ಲಿ ಓಡುತ್ತಿರುವ ಎತ್ತುಗಳು
ಲಕ್ಷ್ಮೇಶ್ವರ: ತಾಲ್ಲೂಕಿನ ಶಿಗ್ಲಿ ಗ್ರಾಮದಲ್ಲಿ ಭಾನುವಾರ ತಾಲ್ಲೂಕು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಹಮ್ಮಿಕೊಂಡಿದ್ದ ಖಾಲಿಗಾಡಾ ಓಡಿಸುವ ಸ್ಪರ್ಧೆ ಅದ್ದೂರಿಯಾಗಿ ಜರುಗಿತು.
ಜೋಡೆತ್ತಿನ ಬಂಡಿಯನ್ನು ಚಾಲಕ ಹುರುಪಿನಿಂದ ಓಡಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ಪ್ರೇಕ್ಷಕರು ಕೇಕೆ ಹಾಕಿ ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನ ಹೋರಿಗಳು ಗಮನ ಸೆಳೆದವು.
ಕುಂದಗೋಳದ ಬಸವಣ್ಣಜ್ಜ ಸ್ವಾಮೀಜಿ ಸ್ಪರ್ಧೆಗೆ ಚಾಲನೆ ನೀಡಿ, ‘ಎತ್ತಿನ ಗಾಡಿ ಓಡಿಸುವುದು, ಕರಿ ಹರಿಯುವುದು ಗ್ರಾಮೀಣ ಜನರ ಮನರಂಜನೆಯ ಕ್ರೀಡೆಗಳಾಗಿವೆ. ಇಂದಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿಯೂ ಇವುಗಳನ್ನು ಉಳಿಸಿಕೊಂಡು ಬರುತ್ತಿರುವ ಗ್ರಾಮೀಣ ಜನರ ಉತ್ಸಾಹ ನಿಜಕ್ಕೂ ಶ್ಲಾಘನೀಯ’ ಎಂದರು.
ಈ ವೇಳೆ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಹಿರೇಮನಿ, ತಾಲ್ಲೂಕು ಘಟಕದ ಅಧ್ಯಕ್ಷ ಭರಮಣ್ಣ ಶೆರಸೂರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಮುಳಗುಂದ, ಲಂಕೆಪ್ಪ ಶೆರಸೂರಿ, ಸುರೇಶ ಹಟ್ಟಿ, ಮಾಂತೇಶ ಶೆರಸೂರಿ, ಹರೀಶ ಲಕ್ಷ್ಮೇಶ್ವರ ಇದ್ದರು. ಬೆಳಗಾವಿ, ಕಲಘಟಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಗಳಿಂದ ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.