ADVERTISEMENT

ಗದಗ: ಕಾರು, ಬಸ್‌ ಡಿಕ್ಕಿಯಾಗಿ ಕಾರು ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 14:39 IST
Last Updated 23 ಏಪ್ರಿಲ್ 2021, 14:39 IST
ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿರುವುದು
ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿರುವುದು   

ಗದಗ: ರೋಣ ಹೆದ್ದಾರಿ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಲಾಯಿಸುತ್ತಿದ್ದ ಕಳಕಪ್ಪ ಸುಗಪ್ಪ (45) ಮೃತ ವ್ಯಕ್ತಿ. ಕಾರಿನಲ್ಲಿದ್ದ ಮೃತರ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

‘ಗದಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿ‌ಸಿ ಬಸ್‌ ಹಾಗೂ ಗದಗದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ವ್ಯಾಗನಾರ್‌ ಕಾರು ನಾರಾಯಣಪುರ ಗ್ರಾಮಕ್ಕಿಂತ ಸ್ವಲ್ಪ ಹಿಂದೆ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದು ಗದಗ ಗ್ರಾಮಾಂತರ ಠಾಣೆ ಪಿಎಸ್‌ಐ ಅಜಿತ್‌ ಹೊಸಮನಿ ತಿಳಿಸಿದ್ದಾರೆ.

ADVERTISEMENT

ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.