ADVERTISEMENT

ಬೈಕ್, ಕಾರು ಅಪಘಾತ: ದಂಪತಿ ಸಾವು

ಅಪಘಾತದ ಬಳಿಕ ಸುಟ್ಟು ಕರಕಲಾದ ಕಾರು– ಬೈಕ್

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 3:11 IST
Last Updated 24 ನವೆಂಬರ್ 2022, 3:11 IST
ನರಗುಂದ ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಹೊತ್ತಿ ಉರಿದ ಬೈಕು ಮತ್ತು ಕಾರು
ನರಗುಂದ ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಹೊತ್ತಿ ಉರಿದ ಬೈಕು ಮತ್ತು ಕಾರು   

ನರಗುಂದ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಭೈರನಹಟ್ಟಿ ಸಮೀಪದ ಕೊಣ್ಣೂರ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಹುಬ್ಬಳ್ಳಿಯವರಾದ ಸಹದೇವ ದೇವರಮನಿ (42) ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರ ಪತ್ನಿ ದೀಪಾ ದೇವರಮನಿ (35) ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಮಾವಾಸ್ಯೆ ಅಂಗವಾಗಿ ಹುಬ್ಬಳ್ಳಿಯ ದಂಪತಿ ಬಾಗಲಕೋಟೆ ಮಾರ್ಗವಾಗಿ ದೇವಸ್ಥಾನಕ್ಕೆ ಹೊರಟಿದ್ದರು. ಬಾಗಲಕೋಟೆ ಕಡೆಯಿಂದ ಅತಿವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ದೀಪಾ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಪ್ರಾಣ ಉಳಿಯಲಿಲ್ಲ.

ನರಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ಬಳಿಕ ಕಾರು ಮತ್ತು ಬೈಕ್‌ಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೈಕ್‌ ಮತ್ತು ಕಾರಿಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬ ಪ್ರಶ್ನೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರಾದರೂ, ಅವರು ಯಾರು? ಎಷ್ಟು ಮಂದಿ ಇದ್ದರು? ಎಲ್ಲಿಯವರು ಎಂಬ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.