ನರಗುಂದ: ರಾಜ್ಯ ಸರ್ಕಾರದ ಎಫ್‌ಐಡಿ ಹೊಂದಿರುವ ರೈತರು ಕೇಂದ್ರ ಸರ್ಕಾರದಿಂದ ದೊರೆಯುವ ಆರ್ಥಿಕ ಲಾಭ ಪಡೆಯಲು ಸೆಂಟ್ರಲ್ ಎಫ್ ಐಡಿ ಮಾಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎಂ.ಎಸ್. ಕುಲಕರ್ಣಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ‘ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಇ- ಕೆವೈಸಿ ಮತ್ತು ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ರೈತರಿಗೆ ನೋಂದಾಯಿತ ರೈತ ಸಂಖ್ಯೆ ನೀಡಲಾಗುತ್ತದೆ. ಈ ಸಂಖ್ಯೆಯನ್ನು ಪಿ.ಎಂ. ಕಿಸಾನ್ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳಲ್ಲೂ ಕಡ್ಡಾಯವಾಗಿ ಉಪಯೋಗಿಸಲಾಗುತ್ತದೆ’ ಎಂದರು.
ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳಿಗೆ ಸಂಪರ್ಕಿಸಬೇಕು. ರೈತರು ಬರುವಾಗ ತಮ್ಮ ಆಧಾರ ಕಾರ್ಡ್, ಆಧಾರನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಪಹಣಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.