ಮುಂಡರಗಿ: ‘ಶಾಸಕ ಡಾ.ಚಂದ್ರು ಲಮಾಣಿ ಅವರು ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನಮನ್ನಣೆ ಗಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ಜನಸೇವೆ ಶ್ಲಾಘನೀಯ’ ಎಂದು ಚಿತ್ರನಟಿ ಪ್ರೇಮಾ ಹರ್ಷವ್ಯಕ್ತಪಡಿಸಿದರು.
ಚಂದ್ರು ಲಮಾಣಿ ಅಭಿಮಾನಿ ಬಳಗವು ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಾಸಕರ ಜನ್ಮದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕಿರಿಯ ವಯಸ್ಸಿನಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಚಂದ್ರು ಲಮಾಣಿ ಅವರು ಮುಂದೆಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾಗೊಳಿಸಲಿ’ ಎಂದು ಆಶಿಸಿದರು.
ಶಾಸಕ ಚಂದ್ರು ಲಮಾಣಿ ಮಾತನಾಡಿ, ‘ಈ ಭಾಗದ ರೈತರ ಜಮೀನುಗಳಿಗೆ ನೀರೊದಗಿಸುವುದು ಸೇರಿದಂತೆ ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರದ ಜನತೆಯ ಪ್ರೀತಿ ಹಾಗೂ ಗೌರವ ಸದಾ ನನ್ನ ಮೇಲಿರಲಿ’ ಎಂದು ಮನವಿ ಮಾಡಿಕೊಂಡರು.
ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಅಧ್ಯಕ್ಷತೆ ವಹಿಸಿದ್ದರು. ಕಲಕೇರಿ– ವಿರುಪಾಪುರದ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅದ್ಯಕ್ಷ ರಾಜು ಕುರಡಗಿ ಮಾತನಾಡಿದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಶಿರಹಟ್ಟಿ ಮತಕ್ಷೇತ್ರದ ಎಲ್ಲ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತಸಲಾಯಿತು. ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕೈಗೊಳ್ಳಲಾಗಿತ್ತು.
ಯುವ ಮುಖಂಡ ಮಂಜುನಾಥ ಮುಧೋಳ, ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಮುಖಂಡರಾದ ಕೆ.ವಿ. ಹಂಚಿನಾಳ, ರವಿ ಉಪ್ಪಿನಬೆಟಗೇರಿ, ರವಿ ದಂಡಿನ, ಎಸ್.ವಿ. ಪಾಟೀಲ, ಕೊಟ್ರೇಶ ಅಂಗಡಿ, ಸರೋಜಾ ಲಮಾಣಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲಿಂಗರಾಜಗೌಡ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.