ಗದಗ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ನ್ಯಾಯಾಲಯದಲ್ಲಿ ವಕೀಲ ರಾಕೇಶ ಕಿಶೋರ್ ಶೂ ಎಸೆಯಲು ಯತ್ನಿಸಿದ್ದನ್ನು ಖಂಡಿಸಿ ಗದಗ ದಲಿತ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಬೆಳಿಗ್ಗೆ 10.30ಕ್ಕೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗದಗ ಜಿಲ್ಲೆಯ ದಲಿತ, ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಒಕ್ಕೂಟದ ಸಂಚಾಲಕ ಮುತ್ತು ಬಿಳೆಯಲಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.