ಸಿದ್ದರಾಮಯ್ಯ , ಮುಖ್ಯಮಂತ್ರಿ
ಗದಗ: ‘ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದ ವರ್ಗದವರೇ. ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಹಿಂದುಳಿದ ವರ್ಗಗಳ ಮಕ್ಕಳೇ ಬಲಿಯಾಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದರು.
ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಮತ್ತು ರಾಜ್ಯಮಟ್ಟದ ಕನಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶದಲ್ಲಿ ಆಳವಾಗಿ ಬೇರುಬಿಟ್ಟ ಜಾತಿ ವ್ಯವಸ್ಥೆ ಇದೆ. ಜಾತಿ ವ್ಯವಸ್ಥೆ ನಿರ್ಮೂಲನೆವರೆಗೆ ಸಮಾನತೆ ಸಾಧ್ಯವಿಲ್ಲ. ಈ ವ್ಯವಸ್ಥೆಯನ್ನು ಜೀವಂತ
ವಾಗಿಡುವ ಸಂಚು ನಡೆದಿದೆ’
ಎಂದರು.
ಬಾನು ವಿರೋಧಿಗಳಿಗೆ ತಕ್ಕ ಪಾಠ: ‘ನಾಡ ಹಬ್ಬ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದವರಿಗೆ ಸುಪ್ರೀಂಕೋರ್ಟ್ ಸರಿಯಾಗಿ ಪಾಠ ಮಾಡಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.