ADVERTISEMENT

ಲಕ್ಷ್ಮೇಶ್ವರ | ಸಿಎಂ ಸಿದ್ಧರಾಮಯ್ಯ ಆಗಮನ: ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 5:33 IST
Last Updated 11 ಡಿಸೆಂಬರ್ 2025, 5:33 IST
ಸಿದ್ಧರಾಮಯ್ಯ
ಸಿದ್ಧರಾಮಯ್ಯ   

ಲಕ್ಷ್ಮೇಶ್ವರ: ‘ಪಟ್ಟಣದ ಸ್ಕೂಲ್ ಚಂದನಕ್ಕೆ ಡಿ. 13ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸುವ ಹಿನ್ನೆಲೆ ಸಕಲ ಸಿದ್ಧತೆ ನಡೆಸಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ‘ಸ್ಕೂಲ್ ಚಂದನದಲ್ಲಿ ಪ್ರತಿವರ್ಷ ನಡೆಯುವ ಕಾರ್ಯಕ್ರಮದಲ್ಲಿ ಶ್ರೇಷ್ಠ ವಿಜ್ಞಾನಿಗಳು ಭಾಗವಹಿಸಿ ಮಾರ್ಗದರ್ಶನ ನೀಡುವರು. ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಆರ್.ಎಸ್.ಪಾಟೀಲ ಅವರಿಗೆ ಚಂದನಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು’ ಎಂದರು.

ಸ್ಕೂಲ್ ಚಂದನದ ಸಂಸ್ಥಾಪಕ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಟಿ.ಈಶ್ವರ ಮಾತನಾಡಿ, ‘ಪ್ರೊ.ಸಿ.ಎನ್‍.ಆರ್. ರಾವ್ ಅವರು ಭಾರತದ ಎರಡು ಕಡೆ ಮಾತ್ರ ವಿಜ್ಞಾನ ವಿಸೃತ ಕಾರ್ಯಕ್ರಮ ರೂಪಿಸಿದ್ದು, ಚಂದನ ಶಾಲೆಯಲ್ಲಿ ನಡೆಯುತ್ತಿರುವುದು ನಮಗೆಲ್ಲ ಹೆಮ್ಮೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಕೆ. ಪಾಟೀಲ, ಮಾಜಿ ಸಚಿವ ಜೈರಾಮ ರಮೇಶ, ಜಿ.ಎಸ್. ಪಾಟೀಲ ಸೇರಿದಂತೆ ಮುಂತಾದವರು ಭಾಗವಹಿಸುವರು ಎಂದು ತಿಳಿಸಿದರು.

ADVERTISEMENT

ಮಾಜಿ ಶಾಸಕ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್ಲ, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಹುಮಾಯೂನ್ ಮಾಗಡಿ, ಆನಂದಸ್ವಾಮಿ ಗಡ್ಡದೇವರಮಠ, ಜಿ.ಆರ್. ಕೊಪ್ಪದ, ಜಿ.ವಿ. ಪಾಟೀಲ, ನಾಗರಾಜ ಮಡಿವಾಳರ, ಚನ್ನಪ್ಪ ಜಗಲಿ, ಸೋಮಣ್ಣ ಬೆಟಗೇರಿ, ವೀರೇಂದ್ರಗೌಡ ಪಾಟೀಲ, ವಿ.ಜಿ. ಪಡಗೇರಿ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.