
ಗದಗ: ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಕೊಳಚೆ ನಿರ್ಮೂಲನಾ ಮಂಡಳಿಯ ಕಂಪ್ಯೂಟರ್ ಆಪರೇಟರ್ ಗುರುನಾಥ ಕಮ್ಮಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೊಪ್ಪಳದ ಖಾಜಾಪಾಷಾ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಮನೆ ಕಟ್ಟಿಸಿಕೊಂಡಿದ್ದು, ಮನೆಗೆ ವಾಣಿಜ್ಯ ಉದ್ದೇಶದ ವಿದ್ಯುತ್ ಸಂಪರ್ಕ ಪಡೆಯಲು ಸಿಸಿಗೆ ಅರ್ಜಿ ಸಲ್ಲಿಸಿದ್ದರು. ಹೊರಗುತ್ತಿಗೆ ನೌಕರ ಗುರುನಾಥ ಕಮ್ಮಾರ ₹1 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಖಾಜಾಪಾಷಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಗುರುನಾಥ ಕಮ್ಮಾರ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಲೋಕಾಯುಕ್ತ ಡಿವೈಎಸ್‌ಪಿ ವಿಜಯ್ ಬಿರಾದಾರ, ಇನ್‌ಸ್ಪೆಕ್ಟರ್ ಪರಮೇಶ್ವರ ಜಿ.ಕವಟಗಿ, ಸಿಬ್ಬಂದಿಯಾದ ವಿ.ಎಸ್. ದೀಪಾಲಿ, ಯು.ಎನ್.ಸ೦ಗನಾಳ, ಎನ್.ಪಿ.ಅಂಬಿಗೇರ, ಎಚ್.ಐ.ದೇಪುರವಾಲಾ, ಎಂ.ಬಿ. ಬಾರಡ್ಡಿ, ಎಂ.ಎಸ್.ದಿಡಗೂರು, ಪಿ.ಎಲ್.ಪಿರಿಮಾಳ, ಎಸ್.ವಿ. ನೈನಾಪೂರ ಹಾಗೂ ಎಂ.ಆರ್. ಹಿರೇಮಠ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.