ಶಿರಹಟ್ಟಿ: ದೊಡ್ಡ ದೊಡ್ಡ ಗುರಿಯನ್ನು ಸಾಧಿಸಬೇಕೆಂಬ ಕನಸು ಹೊತ್ತ ಆಕಾಂಕ್ಷಿಗಳಿಗೆ ಆತ್ಮವಿಶ್ವಾಸವೇ ಪ್ರಮುಖ ಅಸ್ತ್ರ ಎಂದು ಶಾಸಕ ಡಾ.ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.
ಸ್ಥಳೀಯ ಶ್ರೀ ಜ. ಫಕೀರೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಪುಸ್ತಕಗಳ ಬಿಡುಗಡೆ ಮತ್ತು 2025-26ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ನಿರ್ಧಿಷ್ಟ ಗುರಿಯೊಂದಿಗೆ ಸತತ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು ಎಂದು ಹೇಳಿದರು.
ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಭೂಗೋಳ ಶಾಸ್ತ್ರಜ್ಞದ ಮುಖ್ಯಸ್ಥ ಎಲ್.ಟಿ.ನಾಯಕ ಮಾತನಾಡಿ, ಓದು ಬರಹಗಳ ಮೂಲಕ ಭವಿಷ್ಯದ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ. ಅಲ್ಲದೇ ಸಂಸ್ಕಾರ ಭರಿತ ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳ ಸಮಗ್ರ ವಿಕಸನ ಸಾಧ್ಯವಾಗುತ್ತಿದ್ದು, ದೇಶ ಸಮೃದ್ಧವಾಗಬೇಕಾದರೆ ತರಗತಿಯಲ್ಲಿ ಕಲಿಯವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಲಿಷ್ಠರಾಗಿಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪಾಲಕರು ಅವರಿಗೆ ಪೂರಕವಾದ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕಿದ್ದು, ವಿದ್ಯಾರ್ಥಿಗಳು ಸಹ ಸೂಕ್ತ ವಿದ್ಯಾರ್ಜನೆ ಮೂಲಕ ದೇಶದ ಆಸ್ತಿಯಾಗಿ ಹೊರ ಹೊಮ್ಮಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೋ. ಪ್ರಕಾಶ.ಎಚ್.ಹೊಸಮನಿ ಹಾಗೂ ಪ್ರಾಚಾರ್ಯ ಡಾ. ಉಮೇಶ ಅರಹುಣಸಿ ಮಾತನಾಡಿದರು. ಚಂದ್ರಕಾಂತ ನೂರಶಟ್ಟರ, ಎಚ್.ಎಂ. ದೇವಗಿರಿ, ಕೆ.ಎ. ಬಳಿಗಾರ, ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪತ್ತನವರ, ಅಶೋಕ ವರವಿ, ಫಕ್ಕೀರೇಶ ಜಾಲಿಹಾಳ ಹಾಗೂ ಕಾಲೇಜು ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.