ADVERTISEMENT

ಉಚಿತ ಕೋವಿಡ್‌ ಲಸಿಕೆ: ಜಿಲ್ಲಾ ಕಾಂಗ್ರೆಸ್‌ನಿಂದ ರಾಷ್ಟ್ರಪತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 6:00 IST
Last Updated 5 ಜೂನ್ 2021, 6:00 IST
ಗದಗ ಜಿಲ್ಲಾ ಕಾಂಗ್ರೆಸ್‌ ನಿಯೋಗವು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಶುಕ್ರವಾರ ಮನವಿ ಸಲ್ಲಿಸಿತು.
ಗದಗ ಜಿಲ್ಲಾ ಕಾಂಗ್ರೆಸ್‌ ನಿಯೋಗವು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಶುಕ್ರವಾರ ಮನವಿ ಸಲ್ಲಿಸಿತು.   

ಗದಗ: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ಜಿಲ್ಲಾಧಿಕಾರಿ ಮೂಲಕ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ನಿಯೋಗ ಶುಕ್ರವಾರ ಮನವಿ ಸಲ್ಲಿಸಿತು.

ಗದಗ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಎಸ್‌.ಪಾಟೀಲ, ಮಾಜಿ ಶಾಸಕರಾದ ಬಿ.ಆರ್‌.ಯಾವಗಲ್‌, ಡಿ.ಆರ್‌.ಪಾಟೀಲ, ಮುಖಂಡರಾದ ಗುರಣ್ಣ ಬಳಗಾನೂರ, ಪ್ರವೀಣ ಯಾವಗಲ್‌, ಅಶೋಕ ಮಂದಾಲಿ, ಬಸವರಾಜ ಕಡೇಮನಿ, ಫಕೀರಪ್ಪ ಅಗಸಿಮನಿ, ನೀಲಮ್ಮ ಬೊಳನವರ, ಉಮರ ಫಾರುಕ್‌ ಹುಬ್ಬಳ್ಳಿ, ಮಮ್ಮದ್ ಬೆಟಗೇರಿ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT