ADVERTISEMENT

ಕಾಂಗ್ರೆಸ್‌ ಹಿರಿಯ ಮುಖಂಡ ಎಚ್.ಕೆ. ಪಾಟೀಲರಿಗೆ  ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 8:01 IST
Last Updated 28 ಸೆಪ್ಟೆಂಬರ್ 2020, 8:01 IST
ಎಚ್.ಕೆ. ಪಾಟೀಲ
ಎಚ್.ಕೆ. ಪಾಟೀಲ   

ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ ಲಕ್ಷಣಗಳು ಇರಲಿಲ್ಲ. ಆದರೂ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಹಾಗಾಗಿ ಹತ್ತು ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯಲಿದ್ದೇನೆ. ಒಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗಿ ಬರುತ್ತನೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.