ADVERTISEMENT

ಬೊಮ್ಮಾಯಿ ಎಲೆಕ್ಟೆಡ್‌ ಸಿಎಂ ಅಲ್ಲ, ಅಪಾಯಿಂಟೆಡ್‌ ಸಿಎಂ: ಸಿದ್ದರಾಮಯ್ಯ ಮೂದಲಿಕೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 14:31 IST
Last Updated 6 ಮೇ 2022, 14:31 IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ಬಸವರಾಜ ಬೊಮ್ಮಾಯಿ ಎಲೆಕ್ಟೆಡ್‌ ಮುಖ್ಯಮಂತ್ರಿ ಅಲ್ಲ; ಬದಲಾಗಿ ಅವರು ಅಪಾಯಿಂಟೆಡ್‌ ಸಿಎಂ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದರು.

ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎನ್ನುವುದಾದರೆ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸಿದ್ದು ಯಾಕೆ’ ಎಂದು ಪ್ರಶ್ನಿಸಿದರು.

‘ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ನ್ಯಾಯಾಂಗ ತನಿಖೆ ನಡೆಸಬೇಕು. ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಪಿಎಸ್‌ಐ ಆಯ್ಕೆ ಪಟ್ಟಿಯಲ್ಲಿ ಸಚಿವ ಅಶ್ವತ್ಥ ನಾರಾಯಣ ಅವರ ಇಬ್ಬರು ಸಂಬಂಧಿಕರ ಹೆಸರಿದೆ. ಮುಖ್ಯಮಂತ್ರಿ ತನ್ನ ಸಂಪುಟದ ಸಚಿವರ ರಕ್ಷಣೆ ಮಾಡುವುದನ್ನು ಬಿಟ್ಟು ತನಿಖೆ ಮಾಡಿಸಿದರೆ ಎಲ್ಲವೂ ಬಯಲಿಗೆ ಬರಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.