ರೋಣ: ‘ಪಕ್ಷದ ಮೇಲೆ ನಂಬಿಕೆ ಇಟ್ಟು ಸಾಂಪ್ರದಾಯಿಕವಾಗಿ ಮತ ಹಾಕುವ ಅಲ್ಪಸಂಖ್ಯಾತರ ಜತೆ ಕಾಂಗ್ರೆಸ್ ನಿಲ್ಲುತ್ತದೆ’ ಎಂದು ಕಾಂಗ್ರೆಸ್ ಪಕ್ಷದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಎಸ್. ಪಾಟೀಲ ಹೇಳಿದರು.
ಪಟ್ಟಣದ ಮಲ್ಲಿಕಾರ್ಜುನ ಚಿತ್ರಮಂದಿರಲ್ಲಿ ಬುಧವಾರ ನಡೆದ ಅಲ್ಪಂಸಂಖ್ಯಾತ ಘಟಕದ ಕಾಂಗ್ರೆಸ್ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.
‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಹಲವು ಯೋಜನೆ ನೀಡದ್ದಾರೆ. ಆದ್ದರಿಂದ ಅಲ್ಪಸಂಖ್ಯಾತರು ಜಾಗೃತರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಮುಂದಾಗಬೇಕು’ ಎಂದರು.
ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎಸ್. ಡಿ. ಮಕಾನದರ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಉಮರಪಾರೋಕ ಹುಬ್ಬಳ್ಳಿ, ನಿಸಾರ ಅಹ್ಮದ ಖಾಜಿ, ಎಂ.ಬಿ. ನದಾಫ್, ಯುಸೂಫ ಇಟಗಿ, ಬಾವಾಸಾಬ್ ಬೆಟಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.