ನರಗುಂದ: ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿವೇಕ ಯಾವಗಲ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್ ಹೈ ಕಮಾಂಡ್ ಪುನರಾಯ್ಕೆ ಮಾಡಿದೆ.
ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ವಿವೇಕ್ ಯಾವಗಲ್ ಚುನಾವಣಾ ಉಸ್ತುವಾರಿಯಾಗಿ ಕಾಂಗ್ರೆಸ್ ಗೆಲ್ಲುವಲ್ಲಿ ಶ್ರಮವಹಿಸಿದ್ದರು. ಇವರ ಸಂಘಟನಾತ್ಮಕ ಕಾರ್ಯ ಗಮನಿಸಿ ಕಾರ್ಯದರ್ಶಿ ಹುದ್ದೆಗೆ ಪುನರಾಯ್ಕೆ ಮಾಡಿದೆ.
‘ಪಕ್ಷದ ಸಿದ್ದಾಂತಕ್ಕೆ ಬದ್ಧನಾಗಿ, ಹೈ ಕಮಾಂಡ್ ನಿರ್ದೇಶನದಂತೆ ಸಂಘಟನೆಯಲ್ಲಿ ತೊಡಗುತ್ತೇನೆ’ ಎಂದು ವಿವೇಕ್ ಯಾವಗಲ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.