
ಪ್ರಜಾವಾಣಿ ವಾರ್ತೆ
ಗಜೇಂದ್ರಗಡ: ಸಮೀಪದ ಚಿಲಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಕೊಠಡಿಯ ಚಾವಣಿ ಕುಸಿದು ಬಿದ್ದು ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಕಾರಣ ಮಂಗಳವಾರ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು. ಗಾಯಗೊಂಡ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮುಖಂಡರಾದ ಸಿದ್ದಣ್ಣ ಬಂಡಿ, ಸುಭಾಷ್ ಮ್ಯಾಗೇರಿ, ಶಿವರಾಜ ಘೋರ್ಪಡೆ, ಶ್ರೀಧರ್ ಗಂಜಿಗೌಡ್ರ, ಹೆಚ್.ಎಸ್.ಸೋಂಪುರ, ಶ್ರೀಧರ್ ಬಿದರಳ್ಳಿ, ರಾಜು ಸಾಂಗ್ಲಿಕರ್, ಹಸನ್ ತಟಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.