ADVERTISEMENT

ಸೋಂಕು ದೃಢ‌ಪಟ್ಟಿದ್ದ ಗರ್ಭಿಣಿಗೆ ಹೆರಿಗೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 14:17 IST
Last Updated 4 ಜುಲೈ 2020, 14:17 IST
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್–19 ನವಜಾತ ಶಿಶು ಘಟಕದಲ್ಲಿ ಮಗುವಿನ ಚಿಕಿತ್ಸೆ ನೀಡಲಾಗುತ್ತಿದೆ
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್–19 ನವಜಾತ ಶಿಶು ಘಟಕದಲ್ಲಿ ಮಗುವಿನ ಚಿಕಿತ್ಸೆ ನೀಡಲಾಗುತ್ತಿದೆ   

ಗದಗ: ಕೊರೊನಾ ಸೋಂಕು ದೃಢಪಟ್ಟು, ಚಿಕಿತ್ಸೆಗಾಗಿ ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಜಿಮ್ಸ್‌) ದಾಖಲಾಗಿದ್ದ ಗರ್ಭಿಣಿಯೊಬ್ಬರು, ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

‘ಜಿಮ್ಸ್‌’ ವೈದ್ಯರಾದ ಡಾ. ಶಿವನಗೌಡ ಜೋಳದರಾಶಿ, ಡಾ. ಶೃತಿ ಭಾವಿ, ಹಾಗೂ ಡಾ ಅಜಯ್ ಬಸರಿಗಿಡದ ಅವರು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ.

‘ಮಗು 2.7 ಕೆ.ಜಿ ತೂಕ ಹೊಂದಿದ್ದು, ಉಸಿರಾಟದಲ್ಲಿ ಸ್ವಲ್ಪ ತೊಂದರೆ ಉಂಟಾಗಿದ್ದರಿಂದ ಕೋವಿಡ್–19 ನವಜಾತ ಶಿಶು ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಗು ಚೇತರಿಸಿಕೊಳ್ಳುತ್ತಿದೆ’ ಎಂದು ಜಿಮ್ಸ್‌ ನಿರ್ದೇಶಕ ಡಾ.ಪಿ.ಎಸ್‌ ಭೂಸರೆಡ್ಡಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.