ADVERTISEMENT

ಗದಗ: 44 ಮಂದಿಗೆ ಸೋಂಕು; 63 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:54 IST
Last Updated 25 ಸೆಪ್ಟೆಂಬರ್ 2020, 2:54 IST

ಗದಗ: ‘ಜಿಲ್ಲೆಯಲ್ಲಿ ಮತ್ತೆ 44 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,679ಕ್ಕೆ ಏರಿಕೆಯಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 17, ಮುಂಡರಗಿ 2, ನರಗುಂದ 3, ರೋಣ 10, ಶಿರಹಟ್ಟಿ 10 ಹಾಗೂ ಹೊರ ಜಿಲ್ಲೆಯ ಇಬ್ಬರಿಗೆ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ. ‌

ಈವರೆಗೆ 7,758 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 795 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿಯವರೆಗೆ 126 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.