ಗದಗ: ತಾಲ್ಲೂಕಿನ ಹುಲಕೋಟಿ ಗ್ರಾಮದಲ್ಲಿ ವಾಸವಿದ್ದ ವಿಕ್ರಮ್ ಶಿರಹಟ್ಟಿ (30) ಹಾಗೂ ಶಿಲ್ಪಾ (28) ದಂಪತಿ ಒಂದೇ ಸೀರೆಯಿಂದ ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಗದಗ ಜಿಲ್ಲೆಯ ನಾಗಾವಿ ಗ್ರಾಮದ ವಿಕ್ರಮ್ ಹಾಗೂ ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಶಿಲ್ಪಾ ಅವರು ಕೆಲಸದ ನಿಮಿತ್ತ ಹುಲಕೋಟಿ ಗ್ರಾಮದಲ್ಲಿ ವಾಸವಿದ್ದರು. ವೈಯಕ್ತಿಕ ಸಮಸ್ಯೆಗಳು ಹಾಗೂ ಅನಾರೋಗ್ಯದ ಕಾರಣಕ್ಕೆ ಜೀವನದಲ್ಲಿ ಜುಗುಪ್ಸೆಗೊಂಡು ಇಬ್ಬರೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.