ADVERTISEMENT

ಕೋವಿಡ್‌ನಿಂದ ಸಿಆರ್‌ಪಿಎಫ್‌ ಯೋಧ ಸಾವು

​ಪ್ರಜಾವಾಣಿ ವಾರ್ತೆ
Published 1 ಮೇ 2021, 13:05 IST
Last Updated 1 ಮೇ 2021, 13:05 IST
ವೀರಣ್ಣ ಪುಟ್ಟಪ್ಪ ಅಂಗಡಿ (48)
ವೀರಣ್ಣ ಪುಟ್ಟಪ್ಪ ಅಂಗಡಿ (48)   

ಶಿರಹಟ್ಟಿ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಸಿಆರ್‌ಪಿಎಫ್‌ ಯೋಧ ವೀರಣ್ಣ ಪುಟ್ಟಪ್ಪ ಅಂಗಡಿ (48) ಮಹಾರಾಷ್ಟ್ರದ ಚಂದಾಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಸಿಆರ್‌ಪಿಎಫ್‌ನಲ್ಲಿ 22 ವರ್ಷ ಸೇವೆ ಸಲ್ಲಿಸಿದ್ದ ಇವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್‌–19ನಿಂದಾಗಿ ಶುಕ್ರವಾರ ಮೃತ ಪಟ್ಟಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಹಾರಾಷ್ಟ್ರದಲ್ಲಿಯೇ ಯೋಧನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.