ADVERTISEMENT

ಅವಳಿ ನಗರದ ವಿವಿಧೆಡೆ ಡಿಸಿ, ಎಸ್‌ಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 5:34 IST
Last Updated 29 ಏಪ್ರಿಲ್ 2021, 5:34 IST
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು   

ಗದಗ: ಕೋವಿಡ್‌ ಕರ್ಫ್ಯೂಅಂಗವಾಗಿ ಬುಧವಾರ ಗದಗ, ಬೆಟಗೇರಿ ಅವಳಿ ನಗರದಲ್ಲಿ ಜನದಟ್ಟಣೆ ನಿಯಂತ್ರಿಸಲು ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಗರದ ಕೆ.ಎಚ್.ಪಾಟೀಲ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ಸರ್ಕಲ್ ಸೇರಿ ಬೆಟಗೇರಿ ತರಕಾರಿ ಮಾರುಕಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್‌–19 ನಿಯಂತ್ರಣಕ್ಕೆ ಜಾರಿ ಮಾಡಲಾದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗದಂತೆ ನಿಗಾವಹಿಸಬೇಕು. ಮಾಸ್ಕ್‌ ಧರಿಸದವರು ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ADVERTISEMENT

ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಜಾಧವ ಇದ್ದರು.

‘ವಲಸಿಗರ ಮೇಲೆ ನಿಗಾ ವಹಿಸಿ’

ಗದಗ: ‘ಕೋವಿಡ್‌ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕಠಿಣ ಕರ್ಪ್ಯೂ ಜಾರಿಗೊಳಿಸಲಾಗಿದೆ. ಗದಗ ಜಿಲ್ಲೆಗೆ ಬೇರೆ ಸ್ಥಳಗಳಿಂದ ಬಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಮನೆಯಲ್ಲಿಯೇ ಇರುವ ಮೂಲಕ ಸೋಂಕು ನಿಯಂತ್ರಣ ಕಾರ್ಯಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮನವಿ ಮಾಡಿದ್ದಾರೆ.

ಪರ ಊರುಗಳಿಂದ ಜಿಲ್ಲೆಗೆ ಬಂದಿರುವ ಸಾರ್ವಜನಿಕರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ತಕ್ಷಣ ಅವರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದ್ದಾರೆ.

ಬೇರೆ ಜಿಲ್ಲೆ ಹಾಗೂ ಪ್ರದೇಶಗಳಿಂದ ಬರುವ ಸಾರ್ವಜನಿಕರ ಮೇಲೆ ಆಯಾ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹಾಗೂ ನಗರ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಬೇಕು. ಒಟ್ಟಾರೆಯಾಗಿ ಆರೋಗ್ಯ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ನಿಗಾ ವಹಿಸಿ, ಸೋಂಕು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.