ADVERTISEMENT

ಎಚ್‌.ಕೆ.ಪಾಟೀಲ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 23:42 IST
Last Updated 20 ಡಿಸೆಂಬರ್ 2025, 23:42 IST
<div class="paragraphs"><p>ಬಂಧನ</p></div>

ಬಂಧನ

   

ಗದಗ: ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಬರೆಯುವುದರ ಜೊತೆಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವೀರಣ್ಣ ಬೀಳಗಿ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.

ರೋಣ ತಾಲ್ಲೂಕಿನ ಸೂಡಿ ಗ್ರಾಮದ ವೀರಣ್ಣ ಬೀಳಗಿ ಸಚಿವರ ವಿರುದ್ಧ ಫೇಸ್‌ಬುಕ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿರುವುದನ್ನು ಗಮನಿಸಿದ ಗದಗ ಶಹರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ಬಿ.ಅಸೂಟಿ ಅವರು ಬೆಟಗೇರಿ ಬಡಾವಣೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.