
ಪ್ರಜಾವಾಣಿ ವಾರ್ತೆ
ಮಹದಾಯಿ ನದಿ (ಸಂಗ್ರಹ ಚಿತ್ರ)
ನರಗುಂದ (ಗದಗ ಜಿಲ್ಲೆ): ‘ಮಹದಾಯಿ, ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅನುಮತಿ ನೀಡದಿರುವುದನ್ನು ಖಂಡಿಸಿ ಡಿ.1ರಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಸೇನಾ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಪಟ್ಟಣದಲ್ಲಿ ನಡೆದಿರುವ ಹೋರಾಟದ ವೇದಿಕೆಯಲ್ಲಿ ಅವರು ಶುಕ್ರವಾರ ಮಾತನಾಡಿದರು.
‘ಹುಬ್ಬಳ್ಳಿಯಿಂದ ಒಂದೂವರೆ ಸಾವಿರ ಮಂದಿ ರೈಲಿನ ಮೂಲಕ ದೆಹಲಿಗೆ ತೆರಳಿ, ಅಲ್ಲಿನ ವನ್ಯಜೀವಿ ಮಂಡಳಿ ಕಚೇರಿ ಮುಂದೆ ಹೋರಾಟ ನಡೆಸಲಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.