ADVERTISEMENT

ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 11:25 IST
Last Updated 17 ಆಗಸ್ಟ್ 2021, 11:25 IST
ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲ್ಲೂಕು ಹಡಪದ ಅಪ್ಪಣ್ಣ ಮತ್ತು ಸವಿತಾ ಸಮಾಜ ಸಂಘದ ಸದಸ್ಯರು ಉಪತಹಶೀಲ್ದಾರ್‌ ಮಂಜುನಾಥ ದಾಸಪ್ಪನವರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು
ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲ್ಲೂಕು ಹಡಪದ ಅಪ್ಪಣ್ಣ ಮತ್ತು ಸವಿತಾ ಸಮಾಜ ಸಂಘದ ಸದಸ್ಯರು ಉಪತಹಶೀಲ್ದಾರ್‌ ಮಂಜುನಾಥ ದಾಸಪ್ಪನವರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು   

ಲಕ್ಷ್ಮೇಶ್ವರ: ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಹಡಪದ ಅಪ್ಪಣ್ಣ ಮತ್ತು ಸವಿತಾ ಸಮಾಜ ಸಂಘದ ಸದಸ್ಯರು ಉಪತಹಶೀಲ್ದಾರ್‌ ಮಂಜುನಾಥ ದಾಸಪ್ಪನವರ ಅವರಿಗೆ ಮನವಿ ಸಲ್ಲಿಸಿದರು.

‘ಹಡಪದ ಮತ್ತು ಸವಿತಾ ಸಮಾಜದವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಜಾತಿ ಆಧಾರದ ಮೇಲೆ ಮನೆ ಮತ್ತು ಅಂಗಡಿ ಬಾಡಿಗೆ ನೀಡಲು ನಿರಾಕರಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಅಂಬರೀಷ ತೆಂಬದಮನಿ, ವಿನೋದ ನಾವಿ, ಮುತ್ತಣ್ಣ ನಾವಿ, ಶಂಕರ ನಾವಿ, ರಮೇಶ ನಾವಿ, ಸುರೇಶ ಚೌಧರಿ, ಹನಮಂತ ನಾವಿ, ಶಾಂತಪ್ಪ ಹಡಪದ, ಈರಣ್ಣ ನಾವಿ, ಜಗದೀಶ ನಾವಿ, ಲಕ್ಷ್ಮಣ ನಾವಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.