ಪ್ರಾತಿನಿಧಿಕ ಚಿತ್ರ
ಗಜೇಂದ್ರಗಡ: ‘ಆರ್ಥಿಕವಾಗಿ ಪರಾವಲಂಬಿಗಳಾದ ದಲಿತರು, ದೇವದಾಸಿ ಮಹಿಳೆಯರು, ಒಂಟಿ ಮಹಿಳೆಯರು ಹಾಗೂ ಮಸಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ. 20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯಿಂದ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆʼ ಎಂದು ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಮಾಳವ್ವ ಅರಳಿಗಿಡದ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ದೇಶ ಹಾಗೂ ರಾಜ್ಯದಲ್ಲಿ ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯ, ಬಹಿಷ್ಕಾರ ನಿವಾರಣೆಯಲ್ಲಿ ವಿಫಲವಾಗಿವೆ. ಹೀಗಾಗಿ ದೇವದಾಸಿ ಮಹಿಳೆಯರಿಗೆ ವಯೋಮಿತಿ ಹಾಕದೇ ಸಂಪೂರ್ಣ ಗಣತಿ ನಡೆಸಿ, ಪುನರ್ವಸತಿ ಕಲ್ಪಿಸಬೇಕು. ದೇವದಾಸಿ ಪದ್ಧತಿ ನಿಷೇಧದ ಹಳೆಯ ಕಾಯ್ದೆಗಳನ್ನು ತೋರಿಸಿ ದೇವದಾಸಿ ಮಹಿಳೆಯರನ್ನು ಗಣತಿಯಾಚೆ ಇಡುವುದನ್ನು ತಡೆಯಬೇಕು. ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.