ಗದಗ: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾದ ಪಕ್ರರಣಗಳ ತನಿಖೆಗೆ ನಮ್ಮ ಸರ್ಕಾರ ಸ್ವಯಂ ಆಗಿ ಎಸ್‌ಐಟಿ ರಚನೆ ಮಾಡಿಲ್ಲ. ಬದಲಾಗಿ ನ್ಯಾಯಾಲಯದ ನಿರ್ದೇಶನದಂತೆ ರಚಿಸಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
‘ಧರ್ಮಸ್ಥಳ ಪ್ರಕರಣ ಆದಷ್ಟು ಬೇಗ ಮುಕ್ತಾಯಗೊಳಿಸುವ ಯೋಜನೆಯಲ್ಲಿದ್ದೇವೆ. ಧರ್ಮಸ್ಥಳದ ಬಗ್ಗೆ ನಮಗೆ ಬಹಳ ಗೌರವ ಇದೆ. ಯಾರೇ ಬಂದು ದೂರು ನೀಡಿದ ಮೇಲೆ ಸ್ವಾಭಾವಿಕವಾಗಿ ತನಿಖೆ ಮಾಡಲಾಗುತ್ತದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ಪ್ರತಿಯೊಬ್ಬರೂ ಧರ್ಮಸ್ಥಳ ಮಂಜುನಾಥನನ್ನು ನೆನೆಸಿಕೊಳ್ಳುತ್ತೇವೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚನೆ ಮಾಡಿದಾಗ ಪ್ರಾರಂಭದಲ್ಲಿ ಬಿಜೆಪಿ ಸುಮ್ಮನಿತ್ತು. ಆದರೆ, ಇದೀಗ ಅದನ್ನು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.