ಗದಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವರ ಇಂತಿದೆ.
ಮಂಗಳವಾರ ಬೆಳಿಗ್ಗೆ 11ಕ್ಕೆ ಶಿರಹಟ್ಟಿ ತಾಲ್ಲೂಕು ಆಸ್ಪತ್ರೆಯಲ್ಲಿ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಬಳಿಕ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡುವರು. ಬಳಿಕ ಬಿಪಿಎಚ್ ಲ್ಯಾಬ್ ಉದ್ಘಾಟಿಸುವರು. ನಂತರ ಲಕ್ಷ್ಮೇಶ್ವರ ತಾಲ್ಲೂಕಿನ ಬಾಲೆಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯ ವಸತಿಗೃಹ ಉದ್ಘಾಟಿಸುವರು.
ಮಧ್ಯಾಹ್ನ 1ಕ್ಕೆ ಧಾರವಾಡಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.