ADVERTISEMENT

ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 12:48 IST
Last Updated 6 ಡಿಸೆಂಬರ್ 2019, 12:48 IST
ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಇದ್ದರು
ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಇದ್ದರು   

ಗದಗ: ಗದಗ–ಬೆಟಗೇರಿ ನಗರಸಭೆ ಮತ್ತು ಜಿಲ್ಲಾಡಳಿತದಿಂದ ನಗರದಲ್ಲಿ ಶುಕ್ರವಾರ ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.

ನಗರಸಭೆ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಆನಂದ ಕೆ, ನಗರ ಸಭೆ ಪೌರಾಯುಕ್ತ ಮನ್ಸೂರ ಅಲಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ ಮುಧೋಳ ಇದ್ದರು.

ADVERTISEMENT

ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.