ADVERTISEMENT

ಗದಗ: 3 ಗಂಟೆಯವರೆಗೆ ಶೇ 50.32ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 11:25 IST
Last Updated 23 ಏಪ್ರಿಲ್ 2019, 11:25 IST
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್‌ ಪಾಟೀಲ ಅವರು ಮಂಗಳವಾರ ಹುಲಕೋಟಿಯ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 139 ರಲ್ಲಿ ಮತ ಚಲಾಯಿಸಿ, ಬಳಿಕ ಶಾಹಿ ಗುರುತು ತೋರಿಸಿದರು
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್‌ ಪಾಟೀಲ ಅವರು ಮಂಗಳವಾರ ಹುಲಕೋಟಿಯ ಸರ್ಕಾರಿ ಮಾದರಿ ಗಂಡು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 139 ರಲ್ಲಿ ಮತ ಚಲಾಯಿಸಿ, ಬಳಿಕ ಶಾಹಿ ಗುರುತು ತೋರಿಸಿದರು   

ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗ ಜಿಲ್ಲೆಯ ಗದಗ, ರೋಣ, ಶಿರಹಟ್ಟಿ ಮತಕ್ಷೇತ್ರ ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನರಗುಂದ ಮತಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ 43 ರಷ್ಟು ಮತದಾನವಾಗಿದೆ.

ನಾಲ್ಕೂ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಮತದಾನ ಚುರುಕಾಗಿತ್ತು. 10 ಗಂಟೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಿದರು. ಮಧ್ಯಾಹ್ನದ ವೇಳೆ ಉರಿ ಬಿಸಿಲನ್ನೂ ಲೆಕ್ಕಿಸದೆ ಜನರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದರು. ಗ್ರಾಮೀಣ ಪ್ರದೇಶಗಳ ಮತಗಟ್ಟೆಗಳಲ್ಲಿ ಮಧ್ಯಾಹ್ನ 1 ಗಂಟೆಯ ನಂತರ ಮತದಾರರ ಸರತಿ ಸಾಲು ಕಂಡು ಬಂತು. ಜಿಲ್ಲೆಯ ರೋಣ, ಗಜೇಂದ್ರಗಡ, ಲಕ್ಕುಂಡಿ, ಡಂಬಳ, ನರೇಗಲ್‌ ಸೇರಿದಂತೆ ಕೆಲವೆಡೆ ಮತಗಟ್ಟೆಗಳಲ್ಲಿ, ಮತಯಂತ್ರಗಳಲ್ಲಿ ತಾಂತ್ರಿಕ ಲೋಪ ಕಂಡುಬಂದಿದ್ದು,ಮತದಾನಕ್ಕೆ ಸ್ವಲ್ಪ ವಿಳಂಬವಾಯಿತು. ಉಳಿದೆಡೆ ಶಾಂತಿಯುತವಾಗಿ ಮತದಾನ ನಡೆಯಿತು.

ಅಂಗವಿಕಲರನ್ನು ಮನೆಯಿಂದ ಮತಗಟ್ಟೆಗೆ ಮತ್ತು ಮತದಾನದ ನಂತರ ಮರಳಿಗೆ ಮನೆಗೆ ಕರೆದುಕೊಂಡು ಹೋಗಲು ಆಟೊ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 12,168 ಅಂಗವಿಕಲ ಮತದಾರರನ್ನು ಗುರುತಿಸಲಾಗಿತ್ತು. ಇವರಲ್ಲಿ ಶೇ 80ರಷ್ಟು ಮತದಾರರು ಮಧ್ಯಾಹ್ನ 1 ಗಂಟೆಯೊಳಗಾಗಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಶತಾಯುಷಿ ಮತದಾರರು, ಕುಟುಂಬ ಸದಸ್ಯರ ನೆರವಿನೊಂದಿಗೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.