ADVERTISEMENT

ಡಿ.ಆರ್‌.ಪಾಟೀಲಗೆ ರಾಜ್ಯ ಸಚಿವ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 5:58 IST
Last Updated 15 ಅಕ್ಟೋಬರ್ 2025, 5:58 IST
ಡಿ.ಆರ್.ಪಾಟೀಲ
ಡಿ.ಆರ್.ಪಾಟೀಲ   

ಗದಗ: ಮಾಜಿ ಶಾಸಕ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್‌.ಪಾಟೀಲ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ರಾಜ್ಯ ಸಚಿವ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯಗಳನ್ನು ನೀಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕರಣ 310-ಬಿ ಉಪ-ಪ್ರಕರಣ (2)ರಡಿ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರಾದ ಡಿ.ಆರ್.ಪಾಟೀಲ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಈ ಹಿಂದೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈಗ ಅವರಿಗೆ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT