ADVERTISEMENT

ಮುಂಡರಗಿ| ಹನಿ ನೀರಾವರಿ ತ್ವರಿತ ಅನುಷ್ಠಾನಕ್ಕೆ ಕ್ರಮ: ಸಂಸದ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 6:11 IST
Last Updated 23 ನವೆಂಬರ್ 2025, 6:11 IST
ಮುಂಡರಗಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅನಂತ ಚಿತ್ರಗಾರ ಅವರಿಗೆ ‘ಶ್ರೀ ವೀರಭದ್ರೇಶ್ವರ ಪ್ರತಿಷ್ಠಾನ ಪುರಸ್ಕಾರ’ ನೀಡಿ ಗೌರವಿಸಲಾಯಿತು
ಮುಂಡರಗಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅನಂತ ಚಿತ್ರಗಾರ ಅವರಿಗೆ ‘ಶ್ರೀ ವೀರಭದ್ರೇಶ್ವರ ಪ್ರತಿಷ್ಠಾನ ಪುರಸ್ಕಾರ’ ನೀಡಿ ಗೌರವಿಸಲಾಯಿತು   

ಮುಂಡರಗಿ: ‘ಶಿಂಗಟಾಲೂರ ಏತ ನೀರಾವರಿ ಯೊಜನೆಯ ಹನಿ ನೀರಾವರಿ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ತ್ವರಿತಗೊಳಿಸಿ, ಮದ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಪದ್ಧತಿ ಅನುಷ್ಠಾನಗೊಳಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಅಗ್ನಿ ಮಹೋತ್ಸವ, ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರಾತಿ ಬೇಡಿಕೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ಸಾನ್ನಿಧ್ಯ ವಹಿಸಿದ ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ‘ಕುಡಿಯುವ ನೀರು, ಸಾರಿಗೆ ಸಂಪರ್ಕ ಮೊದಲಾದ ಸೌಲಭ್ಯಗಳಿಂದ ವಂಚಿತಗೊಂಡಿದ್ದ ಮುಂಡರಗಿ ತಾಲ್ಲೂಕು ಇದೀಗ ಅಭಿವೃದ್ಧಿ ಹೊಂದುತ್ತಲಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ಕನಕಗಿರಿಯ ಚನ್ನಮಲ್ಲ ಸ್ವಾಮೀಜಿ ಮಾತನಾಡಿದರು. ಯುವ ಉದ್ಯಮಿ ಅನಂತ ಚಿತ್ರಗಾರ ಅವರಿಗೆ ‘ಶ್ರೀವೀರಭದ್ರೇಶ್ವರ ಪ್ರತಿಷ್ಠಾನ ಪುರಸ್ಕಾರ’ ನೀಡಿ ಗೌರವಿಸಲಾಯಿತು.

28 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು. ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಎಸ್.ವಿ. ಲಿಂಬಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಕೊಟ್ರೇಶ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಲತಾ ಕಡ್ಡಿ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ಕುಬಸದ ವಂದಿಸಿದರು.

ಶಾಸಕ ಡಾ.ಚಂದ್ರು ಲಮಾಣಿ, ಜಾತ್ರಾ ಕಮಿಟಿ ಅಧ್ಯಕ್ಷ ವೀರೇಶ ತುಪ್ಪದ, ಮಹಿಳಾ ವೇದಿಕೆ ಅದ್ಯಕ್ಷೆ ಗೌರಮ್ಮ ಹುರಕಡ್ಲಿ, ಕೆ.ವಿ. ಹಂಚಿನಾಳ, ಶಿವಕುಮಾರಗೌಡ ಪಾಟೀಲ, ಲಿಂಗರಾಜಗೌಡ ಪಾಟೀಲ, ಪ್ರಕಾಶ ಮಹಾಜನಶಟ್ಟರ, ಲಕ್ಷ್ಮಣ ಹಳ್ಳೆಪ್ಪನವರ, ಸಾಯಿಪ್ರಸನ್ನ ಅಳವುಂಡಿ, ಶರಣಪ್ಪ ಕರಡಿ, ವಿ.ಜೆ. ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.