ಗದಗ: ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಸೋಮವಾರ ನಡೆದಿದೆ.
ಸಿದ್ಧಲಿಂಗಪ್ಪ ಸಂಕನೂರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿಗಳು, ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಫೋನ್ ಪೇ ಮೂಲಕ ₹10 ಸಾವಿರ ಹಣ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ.
ಶಾಸಕರು ₹10 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಾರೆಯೇ ಎಂದು ಸಂಶಯಗೊಂಡ ಕೆಲವರು ವಿಷಯವನ್ನು ಎಂಎಲ್‌ಸಿ ಸಂಕನೂರ ಅವರ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತುಕೊಂಡ ಸಂಕನೂರ, ‘ಯಾರೋ ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುತ್ತಿರುವುದಾಗಿ ತಿಳಿದುಬಂದಿದೆ. ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸ್ನೇಹಿತರು ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಬಾರದು ಹಾಗೂ ಹಣ ಕೇಳಿದರೆ ಕೊಡಬಾರದು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.