ADVERTISEMENT

ಗದಗ: ಸಂಭ್ರಮದ ದಂಡಿನ ದುರ್ಗಮ್ಮ ದೇವಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 21 ಮೇ 2025, 13:34 IST
Last Updated 21 ಮೇ 2025, 13:34 IST
ದಂಡಿನ ದುರ್ಗಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರು ದೀಡ್‌ ನಮಸ್ಕಾರ ಹಾಕಿದರು
ದಂಡಿನ ದುರ್ಗಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರು ದೀಡ್‌ ನಮಸ್ಕಾರ ಹಾಕಿದರು   

ಗದಗ: ಇಲ್ಲಿನ ಬೆಟಗೇರಿ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ಭಕ್ತರು ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದರು. ನೈವೇದ್ಯ ಸಮರ್ಪಣೆ, ಹರಕೆ ತೀರಿಸುವ ವಿಧಿವಿಧಾನಗಳು ನಡೆದವು.

ನಾಗಸಮುದ್ರ ಮುಖ್ಯರಸ್ತೆಯಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರೆಗೆ ಮಹಾರಾಷ್ಟ, ಗೋವಾ, ದೆಹಲಿ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸವಾಗಿರುವ ಹರಣ ಶಿಕಾರಿ ಜನಾಂಗದ ಸಾವಿರಾರು ಭಕ್ತರು ಬಂದಿದ್ದರು.

ಜಾತ್ರೆಗೆ ‍‍ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.