ADVERTISEMENT

‘ಕಾನೂನು ಮೀರಿದರೆ ನಿರ್ದಾಕ್ಷಿಣ್ಯ ಕ್ರಮ’

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 14:14 IST
Last Updated 5 ಜೂನ್ 2025, 14:14 IST
ಲಕ್ಷ್ಮೇಶ್ವರ ಪೊಲೀಸ್‍ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮಾತನಾಡಿದರು
ಲಕ್ಷ್ಮೇಶ್ವರ ಪೊಲೀಸ್‍ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮಾತನಾಡಿದರು   

ಲಕ್ಷ್ಮೇಶ್ವರ: ‘ಯಾವುದೇ ಸಮುದಾಯವಾಗಿರಲಿ. ಹಬ್ಬದ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿದಾಗಿ ಮಾತ್ರ ಸೌಹಾರ್ದ ಮೂಡಲು ಸಾಧ್ಯ. ಪಟ್ಟಣದಲ್ಲಿ ಎಲ್ಲ ಧರ್ಮದವರು ಸಹಬಾಳ್ವೆಯಿಂದ ನಡೆದುಕೊಂಡು ಬರುತ್ತಿದ್ದು, ಅದೇ ಪರಂಪರೆ ಮುಂದುವರಿಯಲಿ’ ಎಂದು ಗದಗ ಡಿವೈಎಸ್ಪಿ ಮುರ್ತುಜಾ ಖಾದ್ರಿ ಹೇಳಿದರು.

ಪಟ್ಟಣದ ಪೊಲೀಸ್‍ ಠಾಣೆಯಲ್ಲಿ ಬುಧವಾರ ಬಕ್ರೀದ್‌ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ‘ಹಬ್ಬಗಳ ಮಹತ್ವವನ್ನು ತಿಳಿಸಿಕೊಡುವ ಜೊತೆಗೆ ಶಾಂತಿಗೆ ಯಾವುದೇ ರೀತಿಯ ಭಂಗವಾಗದಂತೆ ನಿಗಾವಹಿಸುವುದು ಅವಶ್ಯ. ಎಲ್ಲರೂ ಕಾನೂನಿಗೆ ಬದ್ಧರಾಗಿ ನಡೆದುಕೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕ್ರಮ ನಿಶ್ಚಿತ’ ಎಂದು ಎಚ್ಚರಿಕೆ ನೀಡಿದರು.

ಹಿರಿಯ ಮುಖಂಡ ಪೂರ್ಣಾಜಿ ಖರಾಟೆ, ಮುಖಂಡರಾದ ತಿಪ್ಪಣ್ಣ ಸಂಶಿ, ಗಂಗಾಧರ ಮೆಣಸಿನಕಾಯಿ, ಪುರಸಭೆ ಉಪಾಧ್ಯಕ್ಷ ಪೀರದೋಷ ಆಡೂರ, ಮಾಜಿ ಉಪಾಧ್ಯಕ್ಷ ದಾದಾಪೀರ ಮುಚ್ಚಾಲೆ, ಸದಸ್ಯ ಎಸ್.ಕೆ.ಹವಾಲ್ದಾರ, ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‍ಐ ನಾಗರಾಜ ಗಡದ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಅಂಜುಮನ್ ಸಂಸ್ಥೆ ಅಧ್ಯಕ್ಷ ಎಂ.ಎಂ.ಗದಗ, ಅನಿಲ ಮುಳಗುಂದ, ಸುರೇಶ ನಂದೆಣ್ಣವರ, ಸದಾನಂದ ನಂದೆಣ್ಣವರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.