ADVERTISEMENT

ಗದಗ: ಜೂನ್‌ 30ರ ಒಳಗಾಗಿ ಇ– ಕೆವೈಸಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 15:12 IST
Last Updated 17 ಜೂನ್ 2025, 15:12 IST
ಪಡಿತರ ಚೀಟಿ
(ಸಾಂದರ್ಭಿಕ ಚಿತ್ರ)
ಪಡಿತರ ಚೀಟಿ (ಸಾಂದರ್ಭಿಕ ಚಿತ್ರ)   

ಗದಗ: ಎಲ್ಲ ಪಡಿತರ ಚೀಟಿದಾರರು ಹಾಗೂ ಕುಟುಂಬ ಸದಸ್ಯರು ಜೂನ್ 30ರ ಒಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಕಡ್ಡಾಯವಾಗಿ ಇ– ಕೆವೈಸಿ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಇ– ಕೆವೈಸಿ ಮಾಡಲು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಊರಲ್ಲಿ ಇಲ್ಲದೆ ಇದ್ದ ಪಕ್ಷದಲ್ಲಿ ಪಡಿತರ ಚೀಟಿಯ ಸಂಖ್ಯೆ, ಆಧಾರ್ ಕಾರ್ಡ್‌ನೊಂದಿಗೆ ರಾಜ್ಯದ ಯಾವುದೇ ಜಿಲ್ಲೆ, ತಾಲ್ಲೂಕು ಅಥವಾ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಇ– ಕೆವೈಸಿ ಮಾಡಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.