ADVERTISEMENT

ಏ.23ರಂದು ಚುನಾವಣೆ; ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತ ಕ್ರಮ,ಸಿದ್ಧತೆ ಪೂರ್ಣ

ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 13:04 IST
Last Updated 21 ಏಪ್ರಿಲ್ 2019, 13:04 IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶಿರಹಟ್ಟಿಗೆ ಆಗಮಿಸಿದ ಅರೆಸೇನಾ ಪಡೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪರೇಡ್‌ ನಡೆಸಿತು
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶಿರಹಟ್ಟಿಗೆ ಆಗಮಿಸಿದ ಅರೆಸೇನಾ ಪಡೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪರೇಡ್‌ ನಡೆಸಿತು   

ಗದಗ: ಹೊಸ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ 5ನೇ ಲೋಕಸಭಾ ಚುನಾವಣೆಗೆ ಜಿಲ್ಲೆ ಸಿದ್ಧಗೊಂಡಿದೆ. ಏ.23ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಬಹುದಾಗಿದೆ.

‘ಜಿಲ್ಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾರರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ತೆರಳಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು’ ಎಂದು ಭಾನುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಂಜಿ.ಹಿರೇಮಠ ಮನವಿ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 959 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 740 ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 219 ಮತಗಟ್ಟೆಗಳು ಬರುತ್ತವೆ. ಚುನಾವಣಾ ಕಾರ್ಯಕ್ಕಾಗಿ ಒಟ್ಟು 4236 ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 188 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 162 ಮತಗಟ್ಟೆಗಳಿಗೆ ಮೈಕ್ರೊ ಅಬ್ಸರ್ವರ್‌ಗಳನ್ನು ನಿಯೋಜಿಸಿದ್ದು 48 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಹಾಗೂ 56 ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ.

ADVERTISEMENT

‘ಈ ಬಾರಿ ಜಿಲ್ಲೆಯಲ್ಲಿ ಒಟ್ಟು 1,385 ಮತಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಇ.ಎಲ್ ಕಂಪೆನಿಯ ಐವರು ತಾಂತ್ರಿಕ ಸಿಬ್ಬಂದಿ ಮತದಾನದ ದಿನ ಯಾವುದೇ ಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ತಕ್ಷಣ ಸ್ಥಳಕ್ಕೆ ಹಾಜರಾಗಿ ಸರಿಪಡಿಸುವರು’ ಎಂದು ಜಿಲ್ಲಾಧಿಕಾರಿ ಹೇಳಿದರು.

₹ 2.2ಕೋಟಿ ಮೌಲ್ಯದ ಮದ್ಯ ವಶ
ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಜಿಲ್ಲೆಯಲ್ಲಿ ₹2.2 ಕೋಟಿ ಮೌಲ್ಯದ 50,799 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಬೈಕ್‌, ಆಟೊ, ಗ್ಯಾಸ್‌ ಸಿಲಿಂಡರ್‌ ಸೇರಿ ₹59.26 ಲಕ್ಷ ಮೌಲ್ಯದ ಇತರ ಸಾಮಗ್ರಿಗಳು ಹಾಗೂ ₹1.54 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಒಟ್ಟು 371 ಪ್ರಕರಣ ದಾಖಲಿಸಲಾಗಿದೆ.

ಮತದಾರರ ವಿವರ
ಹಾವೇರಿ ಲೋಕಸಭಾ ಕ್ಷೇತ್ರ

ಮಹಿಳೆ; ಪುರುಷ; ಇತರೆ; ಒಟ್ಟು
330784;334169; 47;665000
(*ಗದಗ,ರೋಣ, ಶಿರಹಟ್ಟಿ ವಿಧಾನಸಭಾ ಕ್ಷೇತ್ರಗಳು ಸೇರಿ)

ಬಾಗಲಕೋಟೆ ಲೋಕಸಭಾ ಕ್ಷೇತ್ರ
ಕ್ಷೇತ್ರ; ಮಹಿಳೆ; ಪುರುಷ; ಇತರೆ; ಒಟ್ಟು
ನರಗುಂದ: 93053; 96025; 6;189,084

4 ವಿಧಾನಸಭಾ ಕ್ಷೇತ್ರಗಳು ಸೇರಿ ಜಿಲ್ಲೆಯ ಒಟ್ಟು ಮತದಾರರು
ಮಹಿಳೆ; ಪುರುಷ; ಇತರೆ; ಒಟ್ಟು

4,238,37; 4,30,194;53;8,54,084

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.