ಸಾವು
ಪ್ರಾತಿನಿಧಿಕ ಚಿತ್ರ
ಮುಂಡರಗಿ: ಖಾಸಗಿಯಾಗಿ ವಿದ್ಯುತ್ ದುರಸ್ತಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಸಂಭವಿಸಿದೆ.
ಪಟ್ಟಣದ ಗುರುಸಿದ್ದಯ್ಯ ವೀರಯ್ಯ ಹಿರೇಮಠ(37) ಮೃತಪಟ್ಟವರು.
ಖಾಸಗಿ ವಿದ್ಯುತ್ ಕೆಲಸದ ನಿಮಿತ್ತ ಗುರುಸಿದ್ದಯ್ಯ ಅವರು ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗುರುಳಿದ್ದಾರೆ. ತಕ್ಷಣ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿಯ ವೈದ್ಯರು ಗುರುಸಿದ್ದಯ್ಯ ಅವರು ಮೃತಪಟ್ಟರುವುದಾಗಿ ತಿಳಿಸಿದರು.
ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.