ADVERTISEMENT

ಸ್ವಾತಂತ್ರ್ಯಾನಂತರ ಸ್ವಾವಲಂಬನೆಗೆ ಒತ್ತು: ಶಾಸಕ ಜಿ.ಎಸ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:57 IST
Last Updated 16 ಆಗಸ್ಟ್ 2025, 7:57 IST
ರೋಣ ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಜಿ.ಎಸ್‌.ಪಾಟೀಲ ಮಾತನಾಡಿದರು 
ರೋಣ ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಜಿ.ಎಸ್‌.ಪಾಟೀಲ ಮಾತನಾಡಿದರು    

ರೋಣ: ಸ್ವಾತಂತ್ರ್ಯಾನಂತರ ದೇಶದಲ್ಲಿ ಆಹಾರ ಭದ್ರತೆ, ಆರ್ಥಿಕ ಪ್ರಗತಿ, ತಂತ್ರಜ್ಞಾನ ಸೇರಿದಂತೆ ವಿವಿಧ ರಂಗಗಳಲ್ಲಿ ದೇಶ ಸ್ವಾವಲಂಬನೆ ಸಾಧಿಸಲು ಎಲ್ಲ ಸರ್ಕಾರಗಳು ಒತ್ತು ಕೊಡುತ್ತಿದ್ದು, ಸ್ವಾತಂತ್ರ್ಯಕ್ಕಿಂತ ಮೊದಲಿನ ಪರಿಸ್ಥಿತಿಗೂ ಇಂದಿನ ಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ದೇಶ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಕಂಡಿದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.

ಪಟ್ಟಣದ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಸ್ವಾತಂತ್ರೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾತಂತ್ರ್ಯದ ನಂತರ ಸಾಮಾಜಿಕವಾಗಿ ಆರ್ಥಿಕವಾಗಿ ದೇಶ ಬಲಿಷ್ಠಗೊಂಡಿದ್ದು, ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಜನತೆಯನ್ನು ಗಮನದಲ್ಲಿಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯದ 1.10 ಕೋಟಿಗೂ ಅಧಿಕ ಕುಟುಂಬಗಳು ಆರ್ಥಿಕವಾಗಿ ಪ್ರಗತಿ ಕಾಣಲು ಸಾಧ್ಯವಾಗಿದೆ ಎಂದರು.

ADVERTISEMENT

ರೋಣ ಮತಕ್ಷೇತ್ರದಲ್ಲಿ ತಾಂತ್ರಿಕ ಶಿಕ್ಷಣ ಅಭಿವೃದ್ಧಿಗಾಗಿ ಜಿಟಿಟಿಸಿ ಕಾಲೇಜು, ಮೊರಾರ್ಜಿ ವಸತಿ ಶಾಲೆಯನ್ನು ಸ್ಥಾಪಿಸಲಾಗಿದೆ. ಜತೆಗೆ ಕಾರ್ಮಿಕ ವಸತಿಶಾಲೆ ಪ್ರಾರಂಭಿಸಲು ಸಿದ್ಧತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ರೈತರ ಹೊಲಗಳಿಗೆ ನಮ್ಮ ಹೊಲ ನಮ್ಮ ರಸ್ತೆ ಯೋಜನೆ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ರೈತರ ಹೊಲಗಳಿಗೆ ರಸ್ತೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

 ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಿಥುನ್‌ ಪಾಟೀಲ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ, ಸದಸ್ಯರಾದ ಮಲ್ಲಯ್ಯ ಮಹಾಪುರುಷಮಠ, ತಹಶೀಲ್ದಾರ್ ನಾಗರಾಜ ಕೆ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದುಕೂರ, ಬಿಇಒ ಅರ್ಜುನ ಕಂಬೋಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.