ಗದಗ: ನಗರದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ‘ನಮ್ಮ ಭೂಮಿ ನಮ್ಮ ಭವಿಷ್ಯ’ ಶೀರ್ಷಿಕೆ ಅಡಿ ಪರಿಸರ ದಿನ ಆಚರಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿ ಸಿ.ಎಸ್.ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಅವರು ಸಸಿಗಳನ್ನು ನೆಟ್ಟು, ನೀರುಣಿಸಿದರು.
ಪರಿಸರ ಪ್ರೇಮಿಗಳಾದ ಲಕ್ಷ್ಮೇಶ್ವರದ ಶಂಕರ ಬ್ಯಾಡಗಿ, ನರಗುಂದದ ನಜೀರ್‌ಸಾಬ್ ಜಮಾದಾರ, ರೋಣದ ಮುತ್ತಣ್ಣ ತಿರ್ಲಾಪುರ, ಗದಗ ಕಿರಣ ಅವರನ್ನು ಸನ್ಮಾನಿಸಲಾಯಿತು.
ಜತೆಗೆ ದಿನಗೂಲಿ ನೌಕರರಾದ ಸೊರಟೂರಿನ ಆನಂದ ಮಲ್ಲಾರಿ, ನೆಲ್ಲೂರಿನ ಶಾಂತಯ್ಯ ಬೆಳವಣಕಿ, ಗದುಗಿನ ಹನುಮಂತ ಮಾಚೇನಹಳ್ಳಿ, ಬಿಡ್ನಾಳದ ಚನ್ನಪ್ಪ ಕಿರದಾಳ, ಕಡಕೋಳದ ಚನ್ನವೀರಯ್ಯ ಗೊಳಗೇರಿಮಠ ಅವರನ್ನೂ ಸನ್ಮಾನಿಸಲಾಯಿತು.
ಇದಕ್ಕೂ ಮುನ್ನ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಚಾಲನೆ ನೀಡಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕಲ್ ಜಾಥಾ ಹಳೆ ಡಿಸಿ ಆಫೀಸ್ ಸರ್ಕಲ್, ಮುಳಗುಂದ ನಾಕಾ ಮಾರ್ಗವಾಗಿ ತಾಲ್ಲೂಕಿನ ಬಿಂಕದಕಟ್ಟಿಯ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನವರೆಗೆ ಸಾಗಿತು.
ಮಾರ್ಗಮಧ್ಯೆ ಹಳೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಮುಳಗುಂದ ನಾಕಾದಲ್ಲಿ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಪರಿಸರ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.