ADVERTISEMENT

ಪೈಗಂಬರರ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 23:02 IST
Last Updated 28 ಸೆಪ್ಟೆಂಬರ್ 2022, 23:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗದಗ: ಸರ್ಕಾರದ ನಿರ್ದೇಶನ ಇಲ್ಲದಿದ್ದರೂ, ಗೋಪ್ಯವಾಗಿ ಪ್ರವಾದಿ ಪೈಗಂಬರರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್‌ ಮುನಾಫ್‌ ಬಿಜಾಪೂರ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್‌.ಬಿರಾದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

‘ಶಾಲೆಯ ಒಟ್ಟು 43 ವಿದ್ಯಾರ್ಥಿಗಳಿಗೆ ‘ಮಹನ್ನದ (ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ (ಸ)’ ಪುಸ್ತಕವನ್ನು ತರಗತಿಯಲ್ಲಿ ವಿತರಿಸಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರಿಗೂ ಮಾಹಿತಿ ನೀಡದೇ ಪ್ರಬಂಧ ಸ್ಪರ್ಧೆ ನಡೆಸಿದ್ದಾರೆ. ಬಹುಮಾನ ನೀಡುವ ಆಮಿಷವನ್ನೂ ಒಡ್ಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾಡಿರುವುದರಿಂದ ಹಾಗೂ ಪ್ರಾಥಮಿಕ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಪೈಗಂಬರ್‌ ಕುರಿತಾದ ಪುಸ್ತಕ ನೀಡಿ, ಇದೇ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದಾರೆ’ ಎಂದು ಆರೋಪಿಸಿ ಶ್ರೀರಾಮ ಸೇನೆಯ ಗದಗ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಶಾಲೆಗೆ ನುಗ್ಗಿ ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.